Sunday, 11th May 2025

ಕುನ್ನತ್ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕೋಲ್ಕತ್ತಾ: ಕುನ್ನತ್ ಮರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಎಲ್ಲರನ್ನೂ ರಂಜಿಸುತ್ತಿದ್ದ ಅವರು ಹಾಡುಗಳ ಮೂಲಕ ಸದಾ ನೆನಪಿನಲ್ಲಿ ಉಳಿದುಕೊಳ್ಳುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡ, ತಮಿಳು, ಹಿಂದಿ ಸೇರಿದಂತೆ ವಿವಿಧ ಭಾಷೆಯ ಸಿನಿಮಾಗಳಲ್ಲಿ ಹಿನ್ನೆಲೆ ಗಾಯಕರಾಗಿ ಹೆಸರು ಮಾಡಿದ್ದ ಕೃಷ್ಣಕುಮಾರ್ ಕುನ್ನತ್(53 ವರ್ಷ) ಕೋಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಭಾಗಿ ಯಾಗಿ, ತದನಂತರ, ಹೋಟೆಲ್ ಗೆ ತೆರಳುತ್ತಿದ್ದ ವೇಳೆ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿ ಕೊಂಡು, ಆಸ್ಪತ್ರೆ ತಲುಪುವಷ್ಟರಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ.

ಕನ್ನಡ, ತಮಿಳು, ಹಿಂದಿ ಸೇರಿದಂತೆ ವಿವಿಧ ಭಾಷೆಯ ಸಿನಿಮಾಗಳಲ್ಲಿ ಹಿನ್ನೆಲೆ ಗಾಯಕರಾಗಿ ಹೆಸರು ಮಾಡಿದ್ದ 53 ವರ್ಷದ ಕುನ್ನತ್ ರವರು ಕೋಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ತದ ನಂತರ, ಹೋಟೆಲ್’ಗೆ ತೆರಳುತ್ತಿದ್ದ ವೇಳೆ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದೆ ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿ ತ್ತಾ ದರೂ ಆಸ್ಪತ್ರೆ ತಲುಪುವಷ್ಟರಲ್ಲೇ ಪ್ರಾಣಪಕ್ಷಿ ಹಾರಿ ಹೋಗಿದೆ.

ಕುನ್ನತ್ ರವರು ಕೋಲ್ಕತ್ತಾದಲ್ಲಿ ಆಯೋಜನೆ ಮಾಡಲಾಗಿದ್ದ ಕಾನ್ಸರ್ಟ್’ನಲ್ಲಿ ಕಾರ್ಯಕ್ರಮದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಹಾಡಿದ್ದರು ಎನ್ನಲಾಗಿದೆ.