Wednesday, 14th May 2025

ನರ್ಸಿಂಗ್ ವಿದ್ಯಾರ್ಥಿಗಳು ಉತ್ತಮ ಸೇವಾ ಮನೋಭಾವ ಬೆಳೆಸಿಕೊಳ್ಳಲಿ

ತುಮಕೂರು: ಇತ್ತೀಚಿನ ದಿನಗಳಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಹಾಗೂ ನರ್ಸಿಂಗ್ ಕ್ಷೇತ್ರದಲ್ಲಿ ಕಲಿಕೆಗೆ ಯಾವುದೇ ಕೊನೆಯಿಲ್ಲ ಹಾಗೂ ವಿದ್ಯಾರ್ಥಿಗಳಿಗೆ ಪ್ರೀತಿಯ ಒಲವುವನ್ನು ಸೇರಿಸಿ ರೋಗಿ ಗಳ ಸೇವೆ ಮಾಡಲು ಸಲಹೆ ನೀಡಬೇಕು ಎಂದು ಶ್ರೀದೇವಿ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್. ಹುಲಿನಾಯ್ಕರ್ ತಿಳಿಸಿದರು.

ನಗರದ ಶ್ರೀದೇವಿ ನರ್ಸಿಂಗ್ ಕಾಲೇಜು ಹಾಗೂ ಶ್ರೀ ರಮಣಮಹರ್ಷಿ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ಡಿಪ್ಲೋಮಾ ನರ್ಸಿಂಗ್ ಮತ್ತು ಬಿ.ಎಸ್ಸಿ., ನರ್ಸಿಂಗ್ ವಿದ್ಯಾರ್ಥಿಗಳಿಗೆ ಜ್ಯೋತಿ ಬೆಳಗಿಸುವ ಹಾಗೂ ಪ್ರತಿಜ್ಞಾ ವಿಧಿ ಬೋಧಿಸುವ ಸಮಾರಂಭ ವನ್ನು ಇತ್ತೀಚಿಗೆ ಶ್ರೀದೇವಿ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಮಾರಂಭದಲ್ಲಿ ಕಾರ್ಯಕ್ರಮದಲ್ಲಿ ಶ್ರೀದೇವಿ ಕಾಲೇಜಿನ ಆಡಳಿತಾಧಿಕಾರಿಯಾದ ಟಿ.ವಿ. ಬ್ರಹ್ಮದೇವಯ್ಯರವರು ಮಾತನಾಡುತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಲಭಿಸುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು, ವೃತ್ತಿ ಜೀವನದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ನರ್ಸಿಂಗ್ ವಿದ್ಯಾರ್ಥಿಗಳು ಉತ್ತಮ ಶುಶ್ರೂಷಕರಾಗಲು ಅಗತ್ಯವಾದ ಗುಣ ಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ತೀವ್ರಗತಿಯ ತಾಂತ್ರಿಕ ಬದಲಾವಣೆ ಹಾಗೂ ವೈದ್ಯಕೀಯ ಉಪಕರಣಗಳ ಬದಲಾವಣೆ ಗಳನ್ನು ಅತ್ಯುತ್ತಮವಾದ ದಿನನಿತ್ಯದ ಕೆಲಸ ಕಾರ್ಯಗಳನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ರಮಣ ಮಹರ್ಷಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಯಾನಂದ್‌ರವರು ಮಾತನಾಡುತ್ತಾ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಜ್ಯೋತಿ ಬೆಳಗಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಸ್ತುತ ಆರೋಗ್ಯದ ಕ್ಷೇತ್ರದಲ್ಲಿ ಬದಲಾವಣೆಯಾಗುತ್ತಿದ್ದು, ವೃತ್ತಿಪರದಲ್ಲಿ ನರ್ಸಿಂಗ್ ಕ್ಷೇತ್ರ ಉತ್ತಮವಾಗುತ್ತದೆ, ನರ್ಸಿಂಗ್ ವಿದ್ಯಾರ್ಥಿಗಳು ಉತ್ತಮ ಶುಶ್ರೂಷಕರಾಗಲು ಅಗತ್ಯವಾದ ಗುಣಗಳನ್ನು ಬೆಳಸಿ ಕೊಳ್ಳಬೇಕು ಎಂದರು.

ನರ್ಸಿಂಗ್ ಕೋರ್ಸ್ ಮಹತ್ವ ಹಾಗೂ ಉದ್ಯೋಗದ ಬೇಡಿಕೆಯ ಬಗ್ಗೆ ಸ್ವವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಹಾಗೂ ಮೂಲಭೂತ ಸೌಲಭ್ಯವನ್ನು ಸದುಪಯೋಗ ಪಡಿಸಿ ಕೊಂಡು ಹೆಚ್ಚು ಹೆಚ್ಚು ಕಲಿಕಾ ಪ್ರಯೋಗಗಳು ಒಳಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳು ಜೀವನದಲ್ಲಿ ಲಭಿಸುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಹಾಗೂ ಶ್ರೀದೇವಿ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್‌ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಮಾರಂಭದಲ್ಲಿ ಶ್ರೀದೇವಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಲಲಿತಾರವರು ಮಾತನಾಡುತ್ತಾ ಜ್ಯೋತಿ ಬೆಳಗಿಸುವುದರ ಹಿಂದಿನ ಮಹತ್ವವನ್ನು ತಿಳಿಸಿದರು. ಹಾಗೂ ಜ್ಯೋತಿ ಬೆಳಗಿಸುವ ಉದ್ದೇಶ ಕತ್ತಲಿನಿಂದ ಬೆಳಕಿನ ಕಡೆಗೆ ಹೋಗುವುದು ಅರ್ಥವೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ವೈದ್ಯರು ಹಾಗೂ ರೋಗಿಗಳ ಮಧ್ಯೆ ಶುಶ್ರೂ ಷಕರು ಸೇತುವೆಯಾಗಿ ಹೇಗೆ ಕಾರ್ಯನಿರ್ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೊ. ಮುನಿಸ್ವಾಮಿರವರು ಮಾತನಾಡುತ್ತಾ ದ್ವೀಪ ಬೆಳಗಿಸುವುದರ ಉದ್ದೇಶವನ್ನು ಸ್ವವಿವರವಾಗಿ ವಿದ್ಯಾರ್ಥಿಗಳಿಗೆ ಪ್ರೀತಿಯ ಒಲವುವನ್ನು ಸೇರಿಸಿ ರೋಗಿಗಳ ಸೇವೆ ಮಾಡಲು ಸಲಹೆ ನೀಡಿದರು.

Leave a Reply

Your email address will not be published. Required fields are marked *