Friday, 16th May 2025

ಮಾತು ಮುಗಿಸಿದ ಬೈರಾಗಿ

ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ನಟನೆಯ 123ನೇ ಸಿನಿಮಾ ಬೈರಾಗಿ ಮಾತಿನ ಭಾಗದ ಚಿತ್ರೀಕರಣ ಮುಗಿಸಿದೆ. ನಿರ್ದೇಶಕ ವಿಜಯ್ ಮಿಲ್ಟನ್ ನಿರ್ದೇಶನವಿರುವ ಈ ಚಿತ್ರಕ್ಕೆ, ನೂರಕ್ಕೂ ಹೆಚ್ಚು ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಈ ಚಿತ್ರದಲ್ಲಿ ಶಿವಣ್ಣ ಹಲವು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಅವರ ಹುಟ್ಟು ಹಬ್ಬದಂದು ಬಿಡುಗಡೆಯಾದ ಟೈಟಲ್, ಟೀಸರ್ ಎಲ್ಲರಿಗೂ ಮೆಚ್ಚುಗೆಯಾಗಿದ್ದು, ಟೈಟಲ್ ಹಾಗೂ ಲುಕ್ ಕಂಡು ಅಭಿಮಾನಿಗಳು ಬೆರಗಾಗಿದ್ದಾರೆ. ಹುಲಿ ವೇಷ, ಹೇರ್ ಸ್ಟೈಲ್ ಹಾಗೂ ಅವರ ಡಿಫರೆಂಟ್ ಕಾಸ್ಟ್ಯೂಮ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಅನೂಪ್ ಸೀಳಿನ್ ಅವರ ಸಂಗೀತಕ್ಕೆ ಅಪಾರ ಮೆಚ್ಚುಗೆ ವ್ಯಕ್ತ ವಾಗಿದೆ.

ಟಗರು ಚಿತ್ರದ ಬಳಿಕ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಇದಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ. ಇಬ್ಬರೂ ಬೇರೆ ಬೇರೆ ಗೆಟಪ್ ಮೂಲಕ ಮೋಡಿ ಮಾಡಲಿದ್ದಾರೆ ಎಂಬುದು ವಿಶೇಷ. ಈಗಾಗಲೇ ಅಧಿಕೃತವಾಗಿ ಬಿಡುಗಡೆಯಾಗಿರುವ ಶಿವಣ್ಣನ ಹುಲಿ ವೇಷದ ಗೆಟಪ್ ಎಲ್ಲೆಡೆ ವೈರಲ್ ಆಗಿದ್ದು, ಶಿವಣ್ಣನ ಪೋಸ್ಟರ್ ರಾರಾಜಿಸುತ್ತಿವೆ.

ಅಂಜಲಿ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಚಿತ್ರದ ಪ್ರಮುಖ ಪಾತ್ರ ದಲ್ಲಿದ್ದಾರೆ. ಹಿರಿಯ ನಟ ಶಶಿಕುಮಾರ್ ಪೊಲೀಸ್ ಅಽಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಕೃಷ್ಣ ಸಾರ್ಥಕ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹಾಡಿನ ಚಿತ್ರೀಕರಣಕ್ಕೆ ಸದ್ಯದಲ್ಲೇ ಮೈಸೂರಿಗೆ ತೆರಳಲಿದೆ ಬೈರಾಗಿ ತಂಡ.

Leave a Reply

Your email address will not be published. Required fields are marked *