Thursday, 15th May 2025

ಹಾಡಿನ ಜತೆಗೆ ಬಂದ ಡಿಎನ್‌ಎ

ಮಾತೃಶ್ರೀ ಎಂಟರ್ ಪ್ರೈಸಸ್ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಚಿತ್ರ ಡಿಎನ್‌ಎ. ಈ ಚಿತ್ರದ ಪ್ರಮೋಷನಲ್ ಹಾಡು ಅನಾವರಣ ಗೊಂಡಿದೆ. ಸಂಗೀತ ನಿರ್ದೇಶಕ ವಿ.ಮನೋಹರ್ ಹಾಡು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿದರು. ಈಗಾಗಲೇ ಚಿತ್ರೀಕರಣದ ಕೆಲಸ ಮುಗಿಸಿಕೊಂಡು ಬಿಡುಗಡೆಗೆ ಸಿದ್ಧವಾಗಿರುವ ತಂಡ, ಪ್ರೋಮೊಷನಲ್ ಸಾಂಗ್ ಜತೆಗೆ ಕಣಕ್ಕಿಳಿದಿದೆ.

ಪ್ರಕಾಶ್ ರಾಜ್ ಮೇಹು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಮೈಲಾರಿ.ಎಂ ಬಂಡವಾಳ ಹೂಡಿದ್ದಾರೆ. ಅಚ್ಯುತ್ ಕುಮಾರ್, ರೋಜರ್ ನಾರಾಯಣ್, ಎಸ್ಟರ್ ನರೋನಾ, ಯುಮನಾ, ಮಾಸ್ಟರ್ ಆನಂದ್ ಪುತ್ರ ಮಾಸ್ಟರ್ ಕೃಷ್ಣ ಚೈತನ್ಯ ಮುಖ್ಯ
ಭೂಮಿಕೆಯಲ್ಲಿ ನಟಿಸಿದ್ದಾರೆ.

ಕಳೆದ 25 ವರ್ಷಗಳಿಂದ ನಾನು ಸಿನಿಮಾರಂಗ ದಲ್ಲಿದ್ದೇನೆ. ಹೀಗಿದ್ದರೂ ಇದು ನನ್ನ ಮೊದಲ ಸಿನಿಮಾ. ಸಾಕಷ್ಟು ಸಿನಿಮಾ ಗಳನ್ನು ನೋಡಿಕೊಂಡು ಬಂದಿದ್ದರಿಂದ ನನ್ನ ಸಿನಿಮಾ ಒಂದೇ ವರ್ಗಕ್ಕಷ್ಟೇ ಸೀಮಿತ ಆಗಬಾರದು ಎಂಬ ನಿಟ್ಟಿನಲ್ಲಿ ಆರ್ಟ್
ಚಿತ್ರವಾಗಿಸದೇ, ಪೂರ್ಣ ಕಮರ್ಷಿಯಲ್ ಚಿತ್ರವಾಗಿಸದೇ ಅದರ ನಡುವಿನ ಸಿನಿಮಾವನ್ನಾಗಿಸಿದ್ದೇನೆ ಅದೇ ಡಿಎನ್‌ಎ. ಶೀರ್ಷಿಕೆಯೇ ಹೇಳುವಂತೆ ಇದೊಂದು ಗುರುತಿನ ಕಣದ ಸಿನಿಮಾ.

ಸಂಪೂರ್ಣ ಸಂದೇಶದೊಂದಿಗೆ ತಯಾರಾಗಿದೆ ಎನ್ನುತ್ತಾರೆ ನಿರ್ದೇಶಕ ಪ್ರಕಾಶ್ ರಾಜ್ ಮೇಹು. ನಾನೂ ಕನ್ನಡದಲ್ಲಿ ಸಿನಿಮಾ ಬೇಕು ಅಂತ ತುಂಬ ದಿನಗಳಿಂದ ಕಾಯುತ್ತಿದ್ದೆ. ಈಗ ಡಿನ್‌ಎ ಮೂಲಕ ಗಟ್ಟಿ ಕಥೆಯೊಂದಿಗೆ ಬಂದಿದ್ದೇನೆ. ಸಂಬಂಧಗಳ ಬಗ್ಗೆ
ಸಿನಿಮಾ ಮಾತನಾಡಲಿದೆ. ನಮ್ಮ ನಡುವಿನ ಕಥೆಯಿದು ಎನ್ನುತ್ತಾರೆ ನಾಯಕಿ ಎಸ್ಟರ್ ನರೋನಾ.

ನಾನು ಮತ್ತು ನಿರ್ದೇಶಕರು ಒಂದೇ ಶಾಲೆಯಲ್ಲಿ ಓದಿದವರು. ಆದರೆ ಒಟ್ಟಿಗೆ ಕೆಲಸ ಮಾಡಿರಲಿಲ್ಲ. ಈ ಸಿನಿಮಾ ಮೂಲಕ ಅದು ಸಾಕಾರವಾಗಿದೆ. ಇದು ಸಂಬಂಧಗಳ ಕುರಿತು ಮಾಡಿದ ಸಿನಿಮಾ. ತಂಡಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸಿದರು ನಟ ಅಚ್ಯುತ್
ಕುಮಾರ್. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಚೇತನ್ ಕೃಷ್ಣ ಸಂಗೀತ ನಿರ್ದೇಶನವಿದೆ.

ರಾಜೇಶ್ ಕೃಷ್ಙ, ಅನುರಾಧಾ ಭಟ್, ಪುಟಾಣಿ ಕೃತಿ, ದನಿಯಲ್ಲಿ ಹಾಡುಗಳು ಮಧುರವಾಗಿ ಮೂಡಿಬಂದಿವೆ. ಚಿತ್ರಕ್ಕೆ
ಶಿವರಾಜ್ ಮೇಹು ಸಂಕಲನ, ರವಿಕುಮಾರ್ ಛಾಯಾಗ್ರಹಣ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಸೆನ್ಸಾರ್ ಮಂಡಳಿ ಯು ಪ್ರಮಾಣಪತ್ರ ನೀಡಿದೆ. ಇದೇ ತಿಂಗಳು ಚಿತ್ರ ತೆರೆಗೆ ಬರಲಿದೆ.

Leave a Reply

Your email address will not be published. Required fields are marked *