Friday, 16th May 2025

ಸದ್ದು ಮಾಡುತ್ತಿದೆ ಧಮ್‌ ಟ್ರೇಲರ್‌

ಕಳೆದ ಕೆಲವು ವರ್ಷಗಳ ಹಿಂದೆ ಕಿಚ್ಚ ಸುದೀಪ್ ಅಭಿನಯದಲ್ಲಿ ಧಮ್ ಚಿತ್ರ ಬಂದಿತ್ತು. ಈಗ ಮತ್ತೆ ಅದೇ ಹೆಸರಿನ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಶ್ರೀಜಿತ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ವಿ.ಆರ್.ಆರ್ ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ನಾನು ಬಾಲನಟನಾಗಿ ಹಾತಿ ಮೇರೆ ಸಾತಿ ಸೇರಿದಂತೆ ಸುಮಾರು ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಹದಿನಾರು ಚಿತ್ರ ಗಳನ್ನು ನಿರ್ದೇಶಿಸಿದ್ದೇನೆ. ನನ್ನ ತಾಯಿ ಮೈಸೂರಿನವರು. ಅವರಿಗೆ ನಾನು ಕನ್ನಡ ಚಿತ್ರ ವೊಂದನ್ನು ನಿರ್ದೇಶಿಸಬೇಕೆಂಬ ಆಸೆಯಿತ್ತು.

ಅದು ಈಗ ಈಡೇರಿದೆ. ಈ ಚಿತ್ರ ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿದೆ. ಈ ಚಿತ್ರದ ನಾಯಕರಾಗಿ ಸಂಚಾರಿ ವಿಜಯ್ ಅಭಿನಯಿಸಬೇಕಿತ್ತು. ಆದರೆ ವಿಜಯ್ ನಮ್ಮನ್ನೆಲ್ಲಾ ಅಗಲಿದರು. ಬಳಿಕ ಶ್ರೀಜಿತ್ ಆಯ್ಕೆಯಾದರು. ನಟಿ ಎರೀನ್ ಅಧಿಕಾರಿ ಈ ಚಿತ್ರದ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶಯ್ಯಾಜಿ ಶಿಂಧೆ, ರವಿಕಾಳೆ, ನಾಗೇಶ್ವರ ರಾವ್, ಗುರುಚಂದ್ರನ್ ಮುಂತಾದವರು ಚಿತ್ರದ ತಾರಾ ಬಳಗದಲ್ಲಿದ್ದಾರೆ. ರಿಹಾನ್ ಅಹಮದ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಜೀವ ವರ್ಷಿಣಿ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಮುಂದಿನ ತಿಂಗಳು ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕರು ತಿಳಿಸಿದರು. ನಾನು ಈ ಹಿಂದೆ ರಂಗ್ ಬಿ ರಂಗಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದೆ. ಇದು ನನ್ನ ಎರಡನೇ ಚಿತ್ರ. ಆಕ್ಷನ್, ಥ್ರಿಲ್ಲರ್, ಸೆಂಟಿಮೆಂಟ್ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿವೆ ಎನ್ನುತ್ತಾರೆ ಶ್ರೀಜಿತ್. ಮೂಲತಃ ಬಂಗಾಳದವರಾದ ಎರೀನ್ ಅಧಿಕಾರಿ
ಇದೇ ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ನಟಿಸುತ್ತಿದ್ದಾರೆ.