Thursday, 15th May 2025

ಖಾಸಗಿ ಪುಟದಲ್ಲಿ ಪ್ರೇಮಕಾವ್ಯ

ನವೀರಾದ ಪ್ರೇಮಕಥೆಯ ಖಾಸಗಿ ಪುಟಗಳು ಸಿನಿಮಾ ತೆರೆಗೆ ಸಿದ್ಧವಾಗಿದ್ದು, ಇದೇ ೧೮ ರಂದು ರಾಜ್ಯಾದ್ಯಂತ ಬಿಡುಗಡೆ ಯಾಗಲಿದೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಟ್ರೇಲರ್ ಹಾಗೂ ಹಾಡುಗಳ ಮೂಲಕ ಸಿನಿಪ್ರಿಯರ ಮನಗೆದ್ದಿದೆ.

ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆ ಈ ಚಿತ್ರದಲ್ಲಿ ಅಡಕವಾಗಿದೆ. ಯುವಕರ ಮನಸೂರೆಗೊಳ್ಳಿದೆ ಎನ್ನುತ್ತಾರೆ ನಿರ್ದೇಶಕರು. ಕಿರುಚಿತ್ರದಲ್ಲಿ ನಟಿಸಿರುವ ವಿಶ್ವ ಈ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಶ್ವೇತಾ ಡಿಸೋಜ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಹಿಂದಿಯ ವೈ ಸಿನಿಮಾದಲ್ಲಿ ಅಭಿನಯಿಸಿರುವ ಶ್ವೇತಾ ಖಾಸಗಿ ಪುಟ ಗಳು ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ  ಎಂಟ್ರಿ ಕೊಟ್ಟಿದ್ದಾರೆ.

ಭೂಮಿ ಎಂಬ ಪಾತ್ರದಲ್ಲಿ ನಟಿಸಿರುವ ಶ್ವೇತಾ ಮುಗ್ಧ ಹುಡುಗಿಯಾಗಿ ಡಬಲ್ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಟ ವಿಶ್ವಗೆ  ಚ್ಚಲ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಇದೆ. ಚೇತನ್ ದುರ್ಗಾ, ನಂದ ಕುಮಾರ್, ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಮತ್ತಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ. ಎಸ್‌ವಿಎಂ ಮೋಶನ್ ಪಿಕ್ಚರ‍್ಸ್ ಬ್ಯಾನರ್‌ನಲ್ಲಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜು ನಾಥ್ ಒಟ್ಟಾಗಿ ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದಾರೆ. ವಿಶ್ವಜಿತ್ ಛಾಯಾಗ್ರಹಣ, ಆಶಿಕ್ ಕುಸುಗೋಳಿ ಸಂಕಲನ ಈ ಚಿತ್ರಕ್ಕಿದೆ.