Tuesday, 13th May 2025

ಹರ್ಭಜನ್ ಸಿಂಗ್’ಗೆ ಕೋವಿಡ್-19 ಪಾಸಿಟಿವ್

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೋವಿಡ್-19 ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.

ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಮುಂದುವರೆಸಿ ರುವುದಾಗಿ ತಿಳಿದು ಬಂದಿದೆ.

ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ ಗೆ ಪಾಸಿಟಿವ್ ಪರೀಕ್ಷಿಸಿದ್ದೇನೆ. ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರನ್ನು ಆದಷ್ಟು ಬೇಗ ಪರೀಕ್ಷೆ ಗೊಳಪಡುವಂತೆ ವಿನಂತಿಸಿದ್ದಾರೆ. ದಯವಿಟ್ಟು ಸುರಕ್ಷಿತವಾಗಿರಿ ಮತ್ತು ಕಾಳಜಿ ವಹಿಸಿ ಎಂದು ಹೇಳಿದ್ದಾರೆ.