Tuesday, 13th May 2025

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಟಿ20ಗೆ ಹಾರ್ದಿಕ್‌ ನಾಯಕ

ವದೆಹಲಿ: ಟಿ೨೦ವಿಶ್ವಕಪ್ ನಂತರ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನ ಆಡಲು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತದ 16 ಸದಸ್ಯರ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ.

ಏಕದಿನ ಪಂದ್ಯಗಳಲ್ಲಿ ಶಿಖರ್ ಧವನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಿದ್ದಾರೆ. ವೇಗಿ ಉಮ್ರಾನ್ ಮಲಿಕ್ ಅವರನ್ನು ವಾಪಸ್ ಕರೆಸಿಕೊಳ್ಳಲಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಟಿ20ಐನಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನ ಮುನ್ನಡೆಸಲಿದ್ದು, ರಿಷಭ್ ಪಂತ್ ಉಪನಾಯಕ ನಾಗಿದ್ದರೆ, ಶಿಖರ್ ಧವನ್ ಏಕದಿನ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ.

ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ವಿಸಿ), ಇಶಾನ್ ಕಿಶನ್, ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್, ಯಜುವೇಂದ್ರ ಚಹಲ್, ಕುಲ್ದೀಪ್, ಹರ್ಷಲ್ ಪಟೇಲ್, ಸಿರಾಜ್, ಭುವನೇಶ್ವರ್, ಅರ್ಶ್ದೀಪ್, ಉಮ್ರಾನ್ ಮಲಿಕ್

ಭಾರತ ಏಕದಿನ ತಂಡ: ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ವಿಸಿ), ಶುಭ್ಮನ್ ಗಿಲ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಚಹಲ್ ಕುಲ್ದೀಪ್ ಯಾದವ್, ಶಹಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್, ಅರ್ಷ್ದೀಪ್ ಸಿಂಗ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್.