Sunday, 11th May 2025

ಐಸಿಸಿ ಟಿ20 ರ‍್ಯಾಂಕಿಂಗ್‌: ಕೊಹ್ಲಿ ನಾಲ್ಕನೇ ಸ್ಥಾನ ಸ್ಥಿರ, ಟಾಪ್‌ ಟೆನ್‌’ನಲ್ಲಿ ಕ್ವಿಂಟನ್ ಡಿ’ಕಾಕ್‌

ದುಬೈ: ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನ, ಸಹ ಆಟಗಾರ ಕೆ.ಎಲ್.ರಾಹುಲ್ ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇಂಗ್ಲೆಂಡ್‌ನ ಡೇವಿಡ್‌ ಮಲಾನ್‌ ಮೊದಲನೇ ಸ್ಥಾನ, ದಕ್ಷಿಣ ಆಫ್ರಿಕಾದ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌ ಕ್ವಿಂಟನ್ ಡಿಕಾಕ್‌ ಎಂಟನೇ ಸ್ಥಾನ ಹಾಗೂ ವೆಸ್ಟ್ ಇಂಡೀಸ್‌ನ ಎವಿನ್ ಲೂಯಿಸ್‌ ಒಂದು ಸ್ಥಾನ ಕುಸಿದು ಒಂಬತ್ತನೇ ಸ್ಥಾನದಲ್ಲಿದ್ದಾರೆ.

ಬೌಲರ್‌ಗಳ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ತಬ್ರೇಜ್ ಶಂಸಿ ಅಗ್ರಸ್ಥಾನದಲ್ಲಿದ್ದರೆ, ಶ್ರೀಲಂಕಾದ ವನಿಂದು ಹಸರಂಗ ಮತ್ತು ಅಫ್ಗಾನಿಸ್ತಾನದ ರಶೀದ್ ಖಾನ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳಲ್ಲಿದ್ದಾರೆ.

ಭಾರತದ ವೇಗಿ ಭುವನೇಶ್ವರ್ ಕುಮಾರ್‌ 12ನೇ ಮತ್ತು ಆಫ್‌ಸ್ಪಿನ್ನರ್‌ ವಾಷಿಂಗ್ಟನ್ ಸುಂದರ್‌ 18ನೇ ಸ್ಥಾನದಲ್ಲಿದ್ದಾರೆ. ಯಜುವೇಂದ್ರ ಚಾಹಲ್ 25ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಆಲ್‌ರೌಂಡರ್‌ಗಳ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ 20ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನವು ಅಫ್ಗಾನಿಸ್ತಾನದ ಮೊಹಮ್ಮದ್ ನಬಿ, ಬಾಂಗ್ಲಾದೇಶದ ಶಕೀಬ್‌ ಅಲ್‌ ಹಸನ್‌ ಅವರು ನಬಿ ನಂತರದ ಸ್ಥಾನದಲ್ಲಿದ್ದಾರೆ.

Leave a Reply

Your email address will not be published. Required fields are marked *