Saturday, 10th May 2025

200 ಏಕದಿನ ಪಂದ್ಯ ಆಡಿದ ಮೊದಲ ಬೌಲರ್ ಜೂಲನ್

ಆಕ್ಲಂಡ್‌: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಭಾರತ ತಂಡವು ಆಸ್ಟ್ರೇಲಿಯಾ ತಂಡದೆದುರು ಸೋಲ ನುಭವಿಸಿತು.

ಮೊದಲು ಬ್ಯಾಟಿಂಗ್ ನಡೆಸಿದ ಭಾರತ 277 ರನ್‌ ಗಳ ಬೃಹತ್‌ ಮೊತ್ತ ಕಲೆ ಹಾಕಿದೆ. ಪ್ರತಿಯಾಗಿ ಆಸೀಸ್‌ ತಂಡ ನಾಲ್ಕು ವಿಕೆಟ್‌ ನಷ್ಟದಲ್ಲಿ ಜಯ ದಾಖಲಿಸಿತು. ಈ ಪಂದ್ಯದಲ್ಲಿ ಭಾರತದ ವೇಗದ ಬೌಲರ್‌ ಜೂಲನ್ ಗೋಸ್ವಾಮಿ ವಿಶ್ವ ದಾಖಲೆ ಬರೆದಿದ್ದಾರೆ.

ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ 200 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಮಹಿಳಾ ಬೌಲರ್ ಹಾಗೂ ಇಷ್ಟು ಪಂದ್ಯಗಳಲ್ಲಿ ಕಣಕ್ಕಿಳಿದಳಿದ ವಿಶ್ವದ ಎರಡನೇ ಆಟಗಾರ್ತಿ ಎಂಬ ವಿಶೇಷ ಮೈಲುಗಲ್ಲು ತಲುಪಿದ್ದಾರೆ.

ಭಾರತ ತಂಡದ ನಾಯಕಿ ಮಿಥಾಲಿ ರಾಜ್ 229 ಪಂದ್ಯಗಳನ್ನಾಡಿ ಅಗ್ರಸ್ಥಾನದಲ್ಲಿದ್ದಾರೆ. ಜೂಲನ್‌ ಏಕದಿನದಲ್ಲಿ 250 ವಿಕೆಟ್‌ ಗಳಿಸಿದ ವಿಶ್ವದ ಮೊದ ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದರು.