Monday, 12th May 2025

ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ನಡೆದ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-1 ಅಂತರದಿಂದ ಗೆದ್ದ ಭಾರತ ಕ್ರಿಕೆಟ್‌ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

‘ಆಸ್ಟ್ರೇಲಿಯಾದಲ್ಲಿ ಭಾರತ ಕ್ರಿಕೆಟ್ ತಂಡದ ಯಶಸ್ಸಿನಿಂದ ನಾವೆಲ್ಲರೂ ಸಂಭ್ರಮಿಸಿದ್ದೇವೆ. ಸರಣಿಯುದ್ದಕ್ಕೂ ಅವರ ಉದ್ದೇಶ, ಸ್ಥೈರ್ಯ ಹಾಗೂ ದೃಢ ನಿಶ್ಚಯ ಕೂಡ. ತಂಡಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಪ್ರಯತ್ನ ಗಳಿಗೂ ಶುಭಾಶಯಗಳು’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಸರಣಿಯ ಮೊದಲ ಪಂದ್ಯವನ್ನು ಹೀನಾಯವಾಗಿದ್ದ ಸೋತಿದ್ದ ಭಾರತ, ಎರಡನೇ ಪಂದ್ಯವನ್ನು ಗೆದ್ದು ತಿರುಗೇಟು ನೀಡಿತ್ತು. ಮೂರನೇ ಪಂದ್ಯ ಡ್ರಾ ನಲ್ಲಿ ಅಂತ್ಯ ಕಂಡರೆ ನಾಲ್ಕನೇ ಪಂದ್ಯವನ್ನು ಅಜಿಂಕ್ಯ ರಹಾನೆ ಪಡೆ ಗೆದ್ದು ಕೊಂಡಿದೆ.

ಮೊದಲ ಪಂದ್ಯದ ಬಳಿಕ ನಾಯಕ ವಿರಾಟ್‌ ಕೊಹ್ಲಿ ತವರಿಗೆ ಮರಳಿದ್ದರು. ಮಾತ್ರವಲ್ಲದೆ ಭುವನೇಶ್ವರ್ ಕುಮಾರ್‌, ಮೊಹಮದ್‌ ಶಮಿಯಂತಹ ಪ್ರಮುಖ ಆಟಗಾರರು ಅಲಭ್ಯರಾಗಿದ್ದರು. ಜಸ್‌ಪ್ರೀತ್‌ ಬೂಮ್ರಾ, ರವೀಂದ್ರ ಜಡೇಜಾ, ಆರ್‌. ಅಶ್ವಿನ್‌ ಅವರೂ ಗಾಯದ ಸಮಸ್ಯೆಯಿಂದಾಗಿ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದರ ನಡುವೆಯೂ ಅಜಿಂಕ್ಯ ರಹಾನೆ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ ಎಂದು ಶ್ಲಾಘಿಸಿದರು.

Leave a Reply

Your email address will not be published. Required fields are marked *