Monday, 12th May 2025

ಕ್ರೀಡಾಳುಗಳಿಂದ ಪ್ರಧಾನಿ ಮೋದಿಗೆ ಶುಭ ಹಾರೈಕೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 72 ವರ್ಷಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ಭಾರತ ಕ್ರಿಕೆಟ್‍

ತಂಡದ ಮಾಜಿ ನಾಯಕ ವಿರಾಟ್‍ ಕೊಹ್ಲಿ, ಭಾರತ ರತ್ನ ಮತ್ತು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಕ್ರೀಡಾ ನಾಯಕರು ಶುಭ ಕೋರಿದರು.

ನಮ್ಮ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮಗೆ ಶಕ್ತಿ, ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಸಚಿನ್ ತೆಂಡೂಲ್ಕರ್ ಶುಭ ಕೋರಿದ್ದಾರೆ.

ಇಂಡಿಯಾ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಟ್ವೀಟ್‍ ಮಾಡಿದ್ದು, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ. ನೀವು ಯುವ ಭಾರತದ ಪ್ರೇರಣೆ ಮತ್ತು ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯ ಮಾದರಿ ಎಂದಿದ್ದಾರೆ.