Monday, 12th May 2025

ಟೆಸ್ಟ್ ಕ್ರಿಕೆಟ್’ಗೆ ಆಲ್’ರೌಂಡರ್ ಮೋಯಿನ್ ಅಲಿ ವಿದಾಯ

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್ ರೌಂಡರ್ ಮೋಯಿನ್ ಅಲಿ ಅವರು ಟೆಸ್ಟ್ ಕ್ರಿಕೆಟ್ ಮಾದರಿಗೆ ವಿದಾಯ ಹೇಳಿದ್ದಾರೆ.

ಸೀಮಿತ ಓವರ್ ಗಳ ಕ್ರಿಕೆಟ್ ಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಈ ನಿರ್ಧಾರ ಕೈಗೊಂಡಿರುವು ದಾಗಿ ಅಲಿ ಹೇಳಿದ್ದಾರೆ. 34ರ ಹರೆಯದ ಮೋಯಿನ್ ಅಲಿ ಇದುವರೆಗೆ 64 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 2014ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಅಲಿ 28.3ರ ಸರಾಸರಿ ಯಲ್ಲಿ 2914 ರನ್ ಗಳಿಸಿದ್ದಾರೆ. ಐದು ಶತಕ ಮತ್ತು 14 ಅರ್ಧಶತಕ ಗಳಿಸಿದ್ದಾರೆ. ಉಪಯುಕ್ತ ಸ್ಪಿನ್ನರ್ ಆಗಿರುವ ಮೋಯಿನ್ ಅಲಿ ಟೆಸ್ಟ್ ಕ್ರಿಕೆಟ್ ನಲ್ಲಿ 195 ವಿಕೆಟ್ ಕಬಳಿಸಿದ್ದಾರೆ.

ಇತ್ತೀಚೆಗೆ ನಡೆದ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಮೋಯಿನ್ ಅಲಿ ಆಡಿದ್ದರು. ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್ ನಲ್ಲಿ ಆಡುತ್ತಿರುವ ಮೋಯಿನ್ ಮುಂದಿನ ದಿನಗಳಲ್ಲಿ ಇಂಗ್ಲೆಂಡ್ ಪರವಾಗಿ ಸೀಮಿತ ಓವರ್ ಕ್ರಿಕೆಟ್ ಮತ್ತು ಕೌಂಟಿ ಕ್ರಿಕೆಟ್ ನಲ್ಲಿ ಆಡುವ ಇರಾದೆ ಹೊಂದಿದ್ದಾರೆನ್ನಲಾಗಿದೆ.

Leave a Reply

Your email address will not be published. Required fields are marked *