Monday, 12th May 2025

ಚೆನ್ನೈಗೆ ಮತ್ತೆ ಎಂ.ಎಸ್.ಧೋನಿ ಸಾರಥ್ಯ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕರ ಬದಲಾವಣೆ ಎರಡನೇ ಬಾರಿಗೆ ನಡೆದಿದೆ.

ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂ.ಎಸ್. ಧೋನಿ ನಾಯಕತ್ವದಡಿಯಲ್ಲಿ ನಾಲ್ಕನೇ ಐಪಿಎಲ್ ಟ್ರೋಫಿಯನ್ನು ಮುಡಿ ಗೇರಿಸಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಉತ್ತರಾಧಿಕಾರಿಯಾಗಿ ನಾಯಕತ್ವದ ಜವಾಬ್ದಾರಿ ಹೊತ್ತ ರವೀಂದ್ರ ಜಡೇಜಾ ಹೇಳಿಕೊಳ್ಳುವಂತಹ ಯಶಸ್ಸು ಸಾಧಿಸಲಿಲ್ಲ. ಟೂರ್ನಿಯ ಆರಂಭದಲ್ಲಿಯೇ ನಾಲ್ಕು ಸಾಲು ಸಾಲು ಸೋಲು ಗಳನ್ನು ಕಂಡು ಮುಗ್ಗರಿಸಿತ್ತು.

ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಮಾತ್ರ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಬರೋಬ್ಬರಿ 6 ಪಂದ್ಯಗಳಲ್ಲಿ ಸೋತು 4 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಹೀಗೆ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಗೆಲುವಿಗಿಂತ ಸೋಲನ್ನೇ ಹೆಚ್ಚು ಕಂಡು ಪ್ಲೇಆಫ್ ಪ್ರವೇಶಿಸುವುದರಲ್ಲಿ ಅನುಮಾನ ಮೂಡಿಸಿ ರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಇದೀಗ ಮತ್ತೆ ಎಂಎಸ್ ಧೋನಿಗೆ ಹಸ್ತಾಂತರಿಸಿದ್ದಾರೆ.