Wednesday, 14th May 2025

ಡೆಹ್ರಾಡೂನ್ ಆಸ್ಪತ್ರೆಗೆ ಕ್ರಿಕೆಟಿಗ ರಿಷಬ್ ಪಂತ್ ಶಿಫ್ಟ್

ಡೆಹ್ರಾಡೂನ್: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟಿಗ ರಿಷಬ್ ಪಂತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿ ಏಮ್ಸ್ ನಿಂದ ಡೆಹ್ರಾಡೂನ್ ಆಸ್ಪತ್ರೆಗೆ ಅವ ರನ್ನು ಶಿಫ್ಟ್ ಮಾಡಲಾಗಿದೆ.

ವೈದ್ಯರ  ಸೂಚನೆ ಮೇರೆಗೆ ರಿಷಬ್ ಪಂತ್ ಅವರನ್ನು ದೆಹಲಿಯಿಂದ ಡೆಹ್ರಾಡೂನ್ ಆಸ್ಪತ್ರೆ ಗೆ ರವಾನಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಅಪಘಾತದಲ್ಲಿ ರಿಷಬ್ ಪಂತ್ ಅವರ ತಲೆ, ಬೆನ್ನು, ಕಾಲಿಗೆ ಗಂಭೀರವಾಗಿ ಗಾಯ ಗಳಾಗಿದ್ದು, ಸುಟ್ಟ ಗಾಯಗಳಿಂದ ಬಳಲು ತ್ತಿದ್ದಾರೆ ಎಂದು ತಿಳಿಸಿದರು.

ರಿಷಬ್ ಪಂತ್ ದೆಹಲಿಯಿಂದ ಉತ್ತರಾಖಂಡ್ ನ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ತೀವ್ರ ಮಂಜು ಕವಿದ ವಾತಾವರಣ ಹಿನ್ನೆಲೆ ಯಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಪಕ್ಕದ ರಸ್ತೆಗೆ ಹೋಗಿ ಬಿದ್ದಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

Read E-Paper click here