Sunday, 11th May 2025

ಧರ್ಮಶಾಲಾದಲ್ಲಿ 125ನೇ ಟಿ 20 ಪಂದ್ಯವನ್ನಾಡಿದ ರೋಹಿತ್ ಶರ್ಮಾ

ಧರ್ಮಶಾಲಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಧರ್ಮಶಾಲಾ ಅಂಗಳದಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 125 ಪಂದ್ಯಗಳನ್ನು ಪೂರ್ಣ ಗೊಳಿಸಿದರು. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಟಿ20 ಕ್ರಿಕೆಟ್ ನಲ್ಲಿ ಪಾಕಿಸ್ತಾನ ಕ್ರಿಕೆಟರ್ ಶೋಯೆಬ್ ಮಲಿಕ್ 124 ಟಿ20 ಪಂದ್ಯಗಳನ್ನಾ ಅತಿ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾ ಮಲಿಕ್ ಅವರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೆರಿದ್ದಾರೆ. ಮಲಿಕ್ 124 ಪಂದ್ಯಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ , ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ಹಫೀಜ್ 119 ಪಂದ್ಯಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ 98 ಟಿ 20 ಪಂದ್ಯಗ ಳನ್ನಾಡಿದ್ದಾರೆ. ವಿರಾಟ್ ಕೊಹ್ಲಿ 97 ಪಂದ್ಯಗಳನ್ನು ಆಡಿದ್ದಾರೆ.