Sunday, 11th May 2025

ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದ ನಾಯಕ ರೋಹಿತ್, ವೇಗಿ ನವದೀಪ್ ಸೈನಿ

ವದೆಹಲಿ: ಢಾಕಾದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ನವದೀಪ್ ಸೈನಿ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಹೇಳಿದೆ.

2ನೇ ಏಕದಿನ ಪಂದ್ಯದ ವೇಳೆ ಎಡಗೈ ಹೆಬ್ಬೆರಳಿನ ಗಾಯದಿಂದಾಗಿ ರೋಹಿತ್ ಶರ್ಮಾ ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ.

ಭಾರತೀಯ ನಾಯಕನು ಪೂರ್ಣ ತೀವ್ರತೆಯಿಂದ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮಾಡುವ ಮೊದಲು ಗಾಯವನ್ನು ಸಂಪೂರ್ಣವಾಗಿ ಗುಣಪಡಿಸಲು ಇನ್ನೂ ಸ್ವಲ್ಪ ಸಮಯ ಬೇಕು. ಹೀಗಾಗಿ ಬಾಂಗ್ಲಾದೇಶದ ವಿರುದ್ಧದ ಎರಡನೇ ಮತ್ತು ಅಂತಿಮ ಟೆಸ್ಟ್ ಗೆ ಲಭ್ಯವಿರುವು ದಿಲ್ಲ.

ಕಿಬ್ಬೊಟ್ಟೆಯ ಸ್ನಾಯು ಸೆಳೆತದಿಂದಾಗಿ ನವದೀಪ್ ಸೈನಿ ಎರಡನೇ ಟೆಸ್ಟ್ನಿಂದ ಹೊರಗುಳಿದಿದ್ದಾರೆ.

Read E-Paper click here