Monday, 12th May 2025

ಚೊಚ್ಚಲ ಪಿಂಕ್ ಬಾಲ್ ಡೇ-ನೈಟ್ ಪಂದ್ಯಕ್ಕೆ ಟೀಂ ಇಂಡಿಯಾ ಬಳಗ ಸಿದ್ದ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಚೊಚ್ಚಲ ಪಿಂಕ್ ಬಾಲ್ ಡೇ-ನೈಟ್ ಪಂದ್ಯಕ್ಕಾಗಿನ ಟೀಮ್ ಇಂಡಿಯಾ ತನ್ನ ಹನ್ನೊಂದರ ಬಳಗವನ್ನು ಹೆಸರಿಸಿದೆ.

ಕಪ್ತಾನ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಹಗಲು-ರಾತ್ರಿ ಪಂದ್ಯದಲ್ಲಿ ಪೃಥ್ವಿ ಶಾ ಹಾಗೂ ಮಯಂಕ್ ಅಗರವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಶುಭಮನ್ ಗಿಲ್ ಹಾಗೂ ಕೆಎಲ್ ರಾಹುಲ್ ಅವಕಾಶ ವಂಚಿತರಾಗಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ಅಜಿಂಕ್ಯ ರಹಾನೆ ಬಲ ತುಂಬ ಲಿದ್ದಾರೆ. ಕೆಳ ಕ್ರಮಾಂಕದಲ್ಲಿ ಹನುಮ ವಿಹಾರಿಗೆ ಅವಕಾಶ ಕಲ್ಪಿಸಲಾಗಿದೆ. ವೃದ್ಧಿಮಾನ್ ಸಹಾ ವಿಕೆಟ್ ಕೀಪಿಂಗ್ ಜವಾಬ್ದಾರಿ ಯನ್ನು ನಿರ್ವಹಿಸಲಿದ್ದಾರೆ.

ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ವೇಗದ ಅಸ್ತ್ರವಾಗಲಿದ್ದಾರೆ. ಇವರಿಗೆ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸಾಥ್ ನೀಡಲಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರವೀಂದ್ರ ಜಡೇಜ ಅವರ ಆಯ್ಕೆಯನ್ನು ಪರಿಗಣಿಸಿಲ್ಲ.

ಇನ್ನುಳಿದಂತೆ ರಿಷಭ್ ಪಂತ್, ಕುಲ್‌ದೀಪ್ ಯಾದವ್, ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಅವಕಾಶ ವಂಚಿತರು. ಆಸೀಸ್ ಪ್ರಯಾಣ ಬೆಳೆಸಿರುವ ರೋಹಿತ್ ಶರ್ಮಾ, ಕೋವಿಡ್ ನಿಯಮದ ಭಾಗವಾಗಿ 14 ದಿನಗಳ ಕ್ವಾರೈಂಟನ್‌ಗೆ ಒಳಗಾಗಿದ್ದಾರೆ.

 

Leave a Reply

Your email address will not be published. Required fields are marked *