Monday, 12th May 2025

ಟೀಂ ಇಂಡಿಯಾಕ್ಕೆ ಸಂಕಷ್ಟ: ಟೆಸ್ಟ್ ಸರಣಿಯಿಂದ ರೋಹಿತ್, ಇಶಾಂತ್ ಔಟ್

ಬೆಂಗಳೂರು: ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾ ವಿರುದ್ಧದ ನಿಗದಿತ ಓವರ್ ಸರಣಿ ತಪ್ಪಿಸಿಕೊಂಡಿರುವ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದಲೂ ಹೊರಗುಳಿಯಬೇಕಾದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೊತೆಗೆ ವೇಗಿ ಇಶಾಂತ್ ಶರ್ಮಾ ಕೂಡಾ ಆಸೀಸ್ ಗೆ ಪ್ರಯಾಣ ಬೆಳೆಸುತ್ತಿಲ್ಲ ಎಂಬುದು ಆಂಗ್ಲ ಮಾಧ್ಯಮ ವರದಿ ಮಾಡಿದೆ.

ರೋಹಿತ್ ಮತ್ತು ಇಶಾಂತ್ ಶರ್ಮಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ನೆಟ್ ಟ್ರೈನಿಂಗ್ ಪಡೆಯುತ್ತಿದ್ದಾರೆ. ಆದರೆ ಇದುವರೆಗೆ ನಿರೀಕ್ಷಿತ ಮಟ್ಟದಲ್ಲಿ ಗುಣಮುಖವಾಗದ ಕಾರಣ ಆಸೀಸ್ ವಿಮಾನ ಏರುವುದು ಅನುಮಾನ ಎಂದು ತಿಳಿದು ಬಂದಿದೆ.

ಇವರಿಬ್ಬರೂ ದುಬೈನಲ್ಲಿ ನಡೆದ ಐಪಿಎಲ್ ನಲ್ಲಿ ಗಾಯಗೊಂಡಿದ್ದರು. ಇಶಾಂತ್ ಶರ್ಮಾ ಆರಂಭದಲ್ಲೇ ಗಾಯಾಳಾಗಿ ತಂಡ ದಿಂದ ಹೊರಬಿದ್ದರೆ, ರೋಹಿತ್ ಟೂರ್ನಿ ಮಧ್ಯೆ ಗಾಯಗೊಂಡಿದ್ದರು.

ಆಸೀಸ್ ಸರಣಿಗೆ ಆಯ್ಕೆಯಾದ ತಂಡದಿಂದ ಇಬ್ಬರು ಆಟಗಾರರನ್ನು ಕೈಬಿಡಲಾಗಿತ್ತು. ಏಕದಿನ ಮತ್ತು ಟಿ20 ತಂಡಕ್ಕೆ ರೋಹಿತ್ ಬದಲು ಕೆ.ಎಲ್.ರಾಹುಲ್ ರನ್ನು ಉಪನಾಯಕರಾಗಿ ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *