ಚೆನ್ನೈ: ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದರಿಂದ ತಂಡಕ್ಕೆ ಹೆಚ್ಚಿನ ಸಮತೋಲನ ಸಿಗಲಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
2021ನೇ ಸಾಲಿನಲ್ಲಿ ಆರ್‌ಸಿಬಿ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿಯುವುದಾಗಿ ಸ್ಪಷ್ಟಪಡಿಸಿದ್ದರು. ಇಂಗ್ಲೆಂಡ್ ವಿರುದ್ಧ ಅಂತಿಮ ಟಿ20ನಲ್ಲಿ ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಿದ್ದರು.
ಕಳೆದ ವರ್ಷ ಮೈಕ್ ಹೆಸ್ಸನ್ ಹಾಗೂ ಕೋಚ್ ಸೈಮನ್ ಕ್ಯಾಟಿಚ್ ಅವರೊಂದಿಗೆ ಐಪಿಎಲ್ 2021ನೇ ಸಾಲಿನಲ್ಲಿ ಇನ್ನಿಂಗ್ಸ್ ಆರಂಭಿಸುವ ಬಗ್ಗೆ ಸೂಚನೆ ನೀಡಿದ್ದೆ. ಅದೃಷ್ಟವಶಾತ್ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಮೊತ್ತ ಗಳಿಸುವ ಮೂಲಕ ಆತ್ಮವಿಶ್ವಾಸ ವೃದ್ಧಿಸಿಕೊಂಡಿದ್ದೆ. ಈಗ ಮತ್ತದೇ ಜವಾಬ್ದಾರಿ ಮುಂದುವರಿಸುವ ನಂಬಿಕೆಯಿದೆ’ ಎಂದು ಹೇಳಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ