Monday, 12th May 2025

ರಾಜ್ಯದಲ್ಲಿ ಕರೋನಾ: 1102 ಜನರಿಗೆ ಸೋಂಕು ಧೃಡ

#corona

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಹೊಸದಾಗಿ 1102 ಜನರಿಗೆ ಕರೋನಾ ಸೋಂಕು ಧೃಡವಾಗಿದ್ದು, 17 ಸೋಂಕಿತರು ಮೃತಪಟ್ಟಿದ್ದಾರೆ.

ಕಿಲ್ಲರ್ ಕರೋನಾ ಸೋಂಕಿಗೆ ರಾಜ್ಯದಲ್ಲಿ 17 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 37,458 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,58,090 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,03,547 ಜನ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ 17,058 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,69,621 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇ.0.64 ರಷ್ಟು ಇದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದೇ ದಿನ 338 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಸದ್ಯ 7119 ಸಕ್ರಿಯ ಪ್ರಕರಣಗಳಿದ್ದು, 277 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Leave a Reply

Your email address will not be published. Required fields are marked *