Wednesday, 14th May 2025

1,624 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ.

ಕಳೆದ 24 ಗಂಟೆಯಲ್ಲಿ 1,624 ಮಂದಿಗೆ ಕೋವಿಡ್ ಪಾಸಿಟಿವ್ ದೃಢ ಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.

ಇನ್ನೂ ಕೊರೋನಾದಿಂದ ಬುಧವಾರ ಇಬ್ಬರು ಮೃತಪಟ್ಟಿದ್ದು, ಇದ ರೊಂದಿಗೆ ಸಾವಿನ ಸಂಖ್ಯೆ 40,094ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 1,176 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,30,482ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 1,647 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,50,794ಕ್ಕೆ ಏರಿಕೆಯಾಗಿದೆ.