Monday, 12th May 2025

ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ನಲ್ಲಿ ಘೋಷಣೆ ಮಾಡಿದರು.

30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ ಏರಿಸಲಾಗುವುದು, ಗ್ರಾಮೀಣ ಜನರೆಗೆ ತಾಲೂಕು ಮಟ್ಟದಲ್ಲಿ ಹೃದಯ ಚಿಕಿತ್ಸೆ ನೀಡಲಾಗುವುದು. ರಾಜ್ಯದಲ್ಲಿ 7 ತಾಲೂಕಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಸ್ಥಾಪನೆ, ಆಶಾ ಕಾರ್ಯಕರ್ತೆಯರಿಗೆ ಗೌರವಧನ 1 ಸಾವಿರ ರೂ. ಏರಿಕೆ ಮಾಡಲಾಗಿದೆ.

ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳನ್ನು ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಹಾಗೂ ಬಾಗಲಕೋಟೆಯಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.