Sunday, 11th May 2025

Bengaluru News: ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಚೆಕ್ ನೀಡಿದ ಡಿಕೆಶಿ

Bengaluru News

ಬೆಂಗಳೂರು: ನಗರದ ಮಲ್ಲೇಶ್ವರಂನ ಆಟದ ಮೈದಾನದಲ್ಲಿ ಗೇಟ್ ಬಿದ್ದು ದುರಂತದಲ್ಲಿ ಮೃತಪಟ್ಟ ಬಾಲಕ ನಿರಂಜನ್ ಪೋಷಕರಿಗೆ ಒಟ್ಟು 10 ಲಕ್ಷ ಪರಿಹಾರದ ಚೆಕ್ ಅನ್ನು ಡಿಸಿಎಂ ಡಿಕೆಶಿ ವಿತರಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರ ಜತೆಗೂಡಿ ಬಾಲಕನ ಮನೆಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು, ನಿರಂಜನ್ ತಂದೆ ತಾಯಿಗೆ ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು. ಬಿಬಿಎಂಪಿ ವತಿಯಿಂದ (Bengaluru News) 5 ಲಕ್ಷ ಪರಿಹಾರ ಹಾಗೂ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ಪರಿಹಾರದ ಚೆಕ್ ವಿತರಿಸಲಾಗಿದೆ.

ಪೋಷಕರಿಗೆ ಸಾಂತ್ವನ ಹೇಳಿದ ಸಚಿವ ದಿನೇಶ್ ಗುಂಡೂರಾವ್, ಬಾಲಕನ ಸಹೋದರಿಯ ವಿದ್ಯಾಭ್ಯಾಸದ ಸಂಪೂರ್ಣ ಹೊಣೆಯನ್ನು ಆರ್. ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ ಎಂದು ಇದೇ ವೇಳೆ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Tirupati Laddu Row: ತಿರುಪತಿ ಲಡ್ಡು ವಿವಾದ; ತಮಿಳುನಾಡು ಡೈರಿ ಸಂಸ್ಥೆ ವಿರುದ್ಧ TTD ದೂರು

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಪ್ರಕರಣ ಕುರಿತು ಈಗಾಗಲೇ ಎಂಜಿನಿಯರ್ ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ. ಘಟನೆ ಆದ ತಕ್ಷಣ ಸ್ಥಳಕ್ಕೆ ಶಾಸಕರು ಭೇಟಿ‌ ನೀಡಿ ಸ್ಪಂದಿಸಿದ್ದಾರೆ.‌ ಇಂದು ನಾನು ಮತ್ತು ದಿನೇಶ್ ಗುಂಡೂರಾವ್ ಅವರು ಕುಟುಂಬಕ್ಕೆ ಸಾಂತ್ವನ ಹೇಳಲು ಬಾಲಕನ ಮನೆಗೆ ಭೇಟಿ ನೀಡಿದ್ದೆವು. ಪಾಲಿಕೆಯಿಂದ 5 ಲಕ್ಷ ಹಾಗೂ ಬ್ಲಾಕ್‌ ಕಾಂಗ್ರೆಸ್‌ನಿಂದ 5 ಲಕ್ಷ ಒಟ್ಟು 10 ಲಕ್ಷ ಪರಿಹಾರ ಚೆಕ್ ವಿತರಿಸಿದ್ದೇವೆ. ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Bengaluru Murder Case: ಸಹೋದ್ಯೋಗಿಯೇ ಹಂತಕ; ಮಹಾಲಕ್ಷ್ಮಿ ಕೊಲೆ ಆರೋಪಿಯ ಫೋಟೊ ರಿವೀಲ್

ಮೃತ ಬಾಲಕನ ಕುಟುಂಬಸ್ಥರು ಸಮಾಜಕ್ಕೆ ಒಳ್ಳೆದಾಗಲಿ ಅಂತ ಕಣ್ಣು ದಾನ ಮಾಡಿದ್ದಾರೆ. ನಿಜಕ್ಕೂ ಇದು ಮೆಚ್ಚುವಂತದ್ದು., ಬಾಲಕನ ತಂಗಿಯ ವಿದ್ಯಾಭ್ಯಾಸಕ್ಕೆ ಆರ್. ಗುಂಡೂರಾವ್ ಫೌಂಡೇಶನ್‌ನಿಂದ ನೆರವು ನೀಡಲು ನಿರ್ಧರಿಸಲಾಗಿದೆ. ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಬೆಂಗಳೂರಿನಲ್ಲಿರುವ ಎಲ್ಲಾ ಪಾರ್ಕ್ ಚೆಕ್ ಮಾಡಲು ತಿಳಿಸಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.