Monday, 12th May 2025

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನ.13ರಂದು ವಿದ್ಯುತ್‌ ವ್ಯತ್ಯಯ

Bengaluru power cut

ಬೆಂಗಳೂರು: ಬೆಂಗಳೂರು ನಗರದ 66/11 ಕೆ.ವಿ. ಹೆಣ್ಣೂರು ರೋಡ್‌ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನ.13 ರಂದು ಬುಧವಾರ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.

ಈ ಸುದ್ದಿಯನ್ನೂ ಓದಿ | Pustaka Santhe: ಮೂರು ದಿನಗಳ ʼವೀರಲೋಕ ಪುಸ್ತಕ ಸಂತೆʼ ನ.15ರಿಂದ; ನೂರಾರು ಅಂಗಡಿ, 100 ಲೇಖಕರು

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ. ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಎಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ, ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.