Saturday, 10th May 2025

21ರಿಂದ ಮಾಜಿ ಸಿಎಂ ಬಿಎಸ್‌ವೈ ರಾಜ್ಯ ಪ್ರವಾಸ ಆರಂಭ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ತುರುಸುಗೊಂಡಿದ್ದು, ಇದೇ ತಿಂಗಳ 21ರಿಂದ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಒಳಗೊಂಡಂತೆ ಪ್ರಮುಖ ನಾಯಕರ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್ , ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಪ್ರವಾಸ ನಡೆಯಲಿದೆ.  ಇದಕ್ಕೆ ಸಂಬಂಧಪಟ್ಟಂತೆ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆದಿದ್ದು, ಮೈಸೂರು ವಿಭಾಗದ ಸಭೆ ನಡೆದಿದೆ ಎಂದು ವರದಿ ವಿವರಿಸಿದೆ.

ಇದೆಲ್ಲದರ ಜತೆಗೆ ಸರಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ದಲ್ಲಿ ಬೃಹತ್ ಸಮಾವೇಶವನ್ನು ಆಗಸ್ಟ್ 28ರಂದು ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.