Tuesday, 13th May 2025

ಆ.28 ರಿಂದ 30ರವರೆಗೆ ಸಿಇಟಿ ಪರೀಕ್ಷೆ

ಬೆಂಗಳೂರು: ಆ.28 ರಿಂದ 30ರವರೆಗೆ ಒಟ್ಟು 530 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಆ. 28ರಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ ಆರು ಸ್ಥಳಗಳಲ್ಲಿ ಆ.30ರಂದು ಕನ್ನಡ ಪರೀಕ್ಷೆ ನಡೆಯಲಿದೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ತೆಗೆದು ಕೊಳ್ಳಲಾಗಿದೆ ಎಂದರು.

ಪರೀಕ್ಷೆ ದಿನದಂದು ಗೃಹ ಇಲಾಖೆಯ ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಿದ್ದು, 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು ಆಯೋಜಿಸಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಕೇವಲ ಒಂದು ಗಂಟೆ 20 ನಿಮಿಷಗಳನ್ನು ಪ್ರತಿ ಪೇಪರ್‌ಗೆ ನೀಡಲಾಗಿರುತ್ತದೆ.ಒಟ್ಟಾರೆ ಪರೀಕ್ಷೆಯು 180 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಆ.30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಗೆ 1682 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಜತೆಗೆ 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

Leave a Reply

Your email address will not be published. Required fields are marked *