Saturday, 10th May 2025

CM Siddaramaiah: ದೇಶದ ಸ್ವಾತಂತ್ರ್ಯ, ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಶಕ್ಕೆ ಸ್ವಾಗತ ಎಂದ ಸಿಎಂ

CM Siddaramaiah

ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಬೆಳಗಾವಿಯಲ್ಲಿ ಇದೇ ಜನವರಿ 21 ರಂದು ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು-ಜೈ ಭೀಮ್ – ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ, ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ಗೌರವ ಇಲ್ಲದೆ, ವಿಗ್ರಹ ಮಾಡಿಟ್ಟುಕೊಂಡಿರುವ ಬಿಜೆಪಿಯವರು, ಗಾಂಧಿ ಬಗ್ಗೆ ಗೌರವ ಇಲ್ಲದ ಬಿಜೆಪಿಯವರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೌರವ ಇಲ್ಲದ ಇವರಿಗೆ, ಅಂಬೇಡ್ಕರ್, ನೆಹರೂ ಯಾರ ಬಗ್ಗೆಯೂ ಗೌರವ ಇಲ್ಲದ ಬಿಜೆಪಿಯವರಿಗೆ ದೇಶದ ಸಂವಿಧಾನ ಮತ್ತು ಚರಿತ್ರೆಯ ಬಗ್ಗೆಯೂ ಗೌರವ ಇಲ್ಲ ಎಂದರು.

ಈ ಸುದ್ದಿಯನ್ನೂ ಓದಿ | BEL Recruitment 2025: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿದೆ 350 ಹುದ್ದೆ; ಹೀಗೆ ಅಪ್ಲೈ ಮಾಡಿ

ನಾವು ಗಾಂಧಿ ವಂಶಸ್ಥರು ಅವರು ಗೋಡ್ಸೆ ವಂಶಸ್ಥರು

ಅಂಬೇಡ್ಕರ್, ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ಸಿನ ಹೋರಾಟದ ಚರಿತ್ರೆಯನ್ನು ನಾವು ಮುಂದಿನ ಪೀಳಿಗೆಗೆ ಅರ್ಥ ಮಾಡಿಸಬೇಕಿದೆ. ನಾವು ಗಾಂಧಿ ವಂಶಸ್ಥರು ಅವರು ಗೋಡ್ಸೆ ವಂಶಸ್ಥರು. ಬಿಜೆಪಿ ಮತ್ತು ಕಾಂಗ್ರೆಸ್ಸಿನ ಈ ಸೈದ್ಧಾಂತಿಕ ವ್ಯತ್ಯಾಸವನ್ನು ಇವತ್ತಿನ ಯುವ ಪೀಳಿಗೆಗೆ ಅರ್ಥೈಸಬೇಕಿದೆ. ಇದಕ್ಕಾಗಿ ಜ 21ರ ಗಾಂಧಿ ಭಾರತ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.

ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ, ಎಲ್ಲಾ ಪಕ್ಷದವರಿಗೂ ಸಮಾವೇಶಕ್ಕೆ ಸ್ವಾಗತ ಎಂದರು.

ಈ ಸುದ್ದಿಯನ್ನೂ ಓದಿ | Job Guide: ಆಯಿಲ್‌ & ನ್ಯಾಚುರಲ್‌ ಕಾರ್ಪೋರೇಷನ್‌ನಲ್ಲಿದೆ 108 ಹುದ್ದೆ; ಆನ್‌ಲೈನ್‌ ಮೂಲಕ ಹೀಗೆ ಅರ್ಜಿ ಸಲ್ಲಿಸಿ

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ, ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ಎಚ್.ಸಿ. ಮಹದೇವಪ್ಪ, ಚಲುವರಾಯಸ್ವಾಮಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸಂತೋಷ್ ಲಾಡ್, ಆರ್.ಬಿ. ತಿಮ್ಮಾಪುರ, ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್, ವಸಂತ ಕುಮಾರ್‌ ಹಾಗೂ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *