Sunday, 11th May 2025

CM Siddaramaiah: ತಾಯಿಯನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಯ ಧೈರ್ಯಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

muda scam cm siddaramaiah

ಬೆಂಗಳೂರು: ಅಪಘಾತದಲ್ಲಿ ಆಟೋರಿಕ್ಷಾದಡಿಗೆ (Road Accident) ಬಿದ್ದ ಮಹಿಳೆಯ ಜೀವ ಉಳಿಸಲು ತಕ್ಷಣವೇ ಸ್ಥಳಕ್ಕೆ ಧಾವಿಸಿ ಆಟೋವನ್ನೇ ಎತ್ತಿ ಸಮಯಪ್ರಜ್ಞೆ ಮೆರೆದ (Viral News) ಪುಟ್ಟ ಬಾಲಕಿಯ ಕೆಲಸವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ ಶ್ಲಾಘಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ನಿನ್ನೆ ಘಟನೆ ನಡೆದಿತ್ತು. ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ಆಕೆಗೆ ಆಟೋ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಮಹಿಳೆ ಆಟೋದಡಿ ಸಿಲುಕಿಕೊಂಡಿದ್ದರು. ಅಲ್ಲೇ ಇದ್ದ ಮಗಳು ತಕ್ಷಣವೇ ಆಟೋ ಮೇಲೆತ್ತಿ ತಾಯಿಯ ಪ್ರಾಣ ಉಳಿಸಿದ್ದಳು. ಆ ಬಾಲಕಿಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೂಡ ಆಕೆಯ ಸಮಯಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವಿಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ ಎಂದು ಹೇಳಿದ್ದಾರೆ.

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದಿದ್ದಾರೆ.

ಈ ಸುದ್ದಿ ಓದಿ: Viral Video: ಮತ್ತೊರ್ವ ಆಟೋ ಚಾಲಕನ ಪುಂಡಾಟ- ಕುಡಿದ ಮತ್ತಿನಲ್ಲಿ ಯುವತಿಗೆ ಕಿರುಕುಳ; ಟ್ರಾಫಿಕ್‌ ಪೊಲೀಸ್‌ಗೆ ಕಪಾಳಮೋಕ್ಷ-ವಿಡಿಯೋ ಇದೆ

Leave a Reply

Your email address will not be published. Required fields are marked *