Saturday, 10th May 2025

Contractor death case: ಗುತ್ತಿಗೆದಾರ ಆತ್ಮಹತ್ಯೆ ಕೇಸ್‌; ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌

Contractor death case

ಕಲಬುರಗಿ: ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ (Contractor death case) ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸರು, ನ್ಯಾಯಾಲಯದ ಗಮನಕ್ಕೆ ತಂದು ಎಫ್‍ಐಆರ್ ದಾಖಲಿಸಿದ್ದಾರೆ.

ಬಿಎನ್‍ಎಸ್ 351(2) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಅಲ್ಲದೇ ಎಫ್‍ಐಆರ್ ಪ್ರತಿಯನ್ನು ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಅವರು ಪ್ರತಿಭಟನಾ ನಿರತ ಬಿಜೆಪಿ ನಾಯಕರಿಗೆ ನೀಡಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್ ರಾಜ್ಯ ರಾಜಕೀಯದಲ್ಲಿ ಕಿಚ್ಚು ಹಚ್ಚಿದೆ. ಬಿಜೆಪಿ ಶಾಸಕ ಮತ್ತಿಮಡು ಸೇರಿ ಹಲವರ ಕೊಲೆಗೆ ರಾಜು ಕಪನೂರ್ ಸಂಚು ರೂಪಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್‍ನಲ್ಲಿ ನನ್ನ ಸಾವಿಗೆ ಕಾಂಗ್ರೆಸ್ ಮುಖಂಡ ರಾಜು ಕಪನೂರ್ ಮತ್ತು ಗ್ಯಾಂಗ್ ಕಾರಣ ಎಂದು ಉಲ್ಲೇಖಿಸಿದ್ದರು. ಅಲ್ಲದೇ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು, ಆಂದೋಲಾ ಶ್ರೀ, ಕಲಬುರಗಿ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ್ ಹಾಗೂ ಚಿತ್ತಾಪುರ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ್ ರಾಠೋಡ್ ಹತ್ಯೆಗೆ ಸುಪಾರಿ ನೀಡಿರುವುದರ ಬಗ್ಗೆ ಡೆತ್‍ನೋಟ್‍ನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Nelamangala News: ರೈಲಿಗೆ ಸಿಲುಕಿ 24 ಮೇಕೆಗಳ ದಾರುಣ ಸಾವು

ಶೀಲ ಶಂಕಿಸಿ ಸುತ್ತಿಗೆಯಿಂದ ಬಡಿದು ಪತ್ನಿಯನ್ನೇ ಕೊಂದ ಪತಿ!

ಬೆಂಗಳೂರು: ಶೀಲ ಶಂಕಿಸಿ ಸುತ್ತಿಗೆಯಿಂದ ಬಡಿದು ಪತ್ನಿಯನ್ನೇ ಪತಿ ಬರ್ಬರವಾಗಿ ಹತ್ಯೆ (Murder Case) ಮಾಡಿರುವ ಘಟನೆ ಬೆಂಗಳೂರಿನ ಹೊರವಲಯದ ಅತ್ತಿಬೆಲೆ ಸಮೀಪದ ಶುಭ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಬಿಹಾರ ಮೂಲದ ಮಲ್ಲಿಕಾ ಖಾತೂನ್ (35) ಕೊಲೆಯಾದ ಮಹಿಳೆ. ಮೊಹಮ್ಮದ್ ಸೈಯ್ಯದ್ ಕೊಲೆಗೈದ ಪತಿ.

ಪತ್ನಿಯ ಶೀಲ ಶಂಕಿಸಿ ಪತಿ ಮೊಹಮ್ಮದ್ ಸೈಯ್ಯದ್ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಇವರಿಗೆ ಇಬ್ಬರು ಮಕ್ಕಳು ಇದ್ದಾರೆ. ಇಂದು ಬೆಳಗ್ಗೆ ಕೂಡ ಪತ್ನಿ ಶೀಲ ಶಂಕಿಸಿ ಪತಿ ಮೊಹಮ್ಮದ್ ಜಗಳ ಮಾಡಿದ್ದಾನೆ. ದಂಪತಿ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಪತ್ನಿಯನ್ನು ಕೊಲೆಗೈದಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.