Saturday, 10th May 2025

DK Shivakumar: ಅಮೆರಿಕ ಪ್ರವಾಸ ಖಾಸಗಿಯದ್ದು, ಯಾವ ನಾಯಕರನ್ನೂ ಭೇಟಿ ಮಾಡುತ್ತಿಲ್ಲ ಎಂದ ಡಿಕೆಶಿ

DK Shivakumar

ಬೆಂಗಳೂರು: ತಾವು ಕುಟುಂಬ ಸದಸ್ಯರ ಜತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಖಾಸಗಿಯದ್ದಾಗಿದ್ದು, ಯಾವುದೇ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ.

ಡಿಸಿಎಂ ಅವರು ಸೆ.8ರಿಂದ 15 ರವರೆಗೆ ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸ ಸಂದರ್ಭದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹಾಗೂ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸುದ್ದಿ ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರು ಮಾಧ್ಯಮ ಹೇಳಿಕೆ ಮೂಲಕ ಈ ಸ್ಪಷ್ಟನೆ ನೀಡಿದ್ದಾರೆ. ಜತೆಗೆ ಅಮೆರಿಕ ಪ್ರವಾಸ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರವನ್ನು ಸಹ ಬಿಡುಗಡೆ ಮಾಡಿದ್ದಾರೆ.

ಅಮೆರಿಕದಲ್ಲಿ ಭಾರತೀಯ ಮತದಾರರನ್ನು ಓಲೈಸಲು ಪ್ರಯತ್ನ

ಅಮೆರಿಕ ಅಧ್ಯಕ್ಷ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಭಾರತೀಯ ಮೂಲದ ಪ್ರಜೆಗಳು ಕೂಡ ಅಮೆರಿಕೆಯಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದು, ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರು ಡೆಮಾಕ್ರಾಟ್‌ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇವರ ವಿರುದ್ಧ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ಅವರು ಕಣಕ್ಕೆ ಇಳಿದಿದ್ದಾರೆ. ಎರಡು ಪಕ್ಷಗಳ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, ಎರಡೂ ಪಕ್ಷಗಳು ಭಾರತೀಯ ಮತದಾರರನ್ನು ಓಲೈಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿವೆ.

ಈ ನಿಟ್ಟಿನಲ್ಲಿ ಅಮೆರಿಕಾದಲ್ಲಿ (US President Election 2024) ಭರದಿಂದ ಸಾಗುತ್ತಿರುವ ಅಧ್ಯಕ್ಷ ಚುನಾವಣೆಗೆ ಡೆಮಾಕ್ರಾಟ್‌ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್‌ (Kamala Harris) ಅವರ ಪಕ್ಷದ ವಿಶೇಷ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivkumar) ವಿಶೇಷ ಆಹ್ವಾನಿತರಾಗಿದ್ದಾರೆ ಎನ್ನಲಾಗಿತ್ತು. ಕಾಂಗ್ರೆಸ್‌ ಹಿರಿಯ ನಾಯಕ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕದ ಹಾಲಿ ಉಪಾಧ್ಯಕ್ಷೆ, ಪ್ರಸ್ತುತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ವಿಶೇಷ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತ ಇಂದು ರಾತ್ರಿ ಅಮೆರಿಕ ಫ್ಲೈಟ್​ ಹತ್ತಲಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಅಮೆರಿಕದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ಇದೀಗ ತಮ್ಮ ಪ್ರವಾಸದ ಕುರಿತು ಡಿ.ಕೆ.ಶಿವಕುಮಾರ್‌ ಅವರು ಸ್ಪಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *