Tuesday, 13th May 2025

ಎಚ್.ಡಿ.ದೇವೇಗೌಡರ ಒಡನಾಡಿ, ಮಾಜಿ ಶಾಸಕ ಎನ್.ಎಸ್.ಖೇಡ್ ನಿಧನ

ವಿಜಯಪುರ: ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಅವರು ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಸಾವಳಸಂಗದಲ್ಲಿ ಸಂಜೆ ಜರುಗಲಿದೆ. ಇಂಡಿ ತಾಲ್ಲೂಕಿನ ಸಾವಳಸಂಗ ಗ್ರಾಮದ ರೈತ ಕುಟುಂಬದವ ರಾದ ಎನ್.ಎಸ್.ಖೇಡ್ ಅವರು 1980ರಲ್ಲಿ ಜನತಾ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಿ, ಕಡಿಮೆ ಮತಗಳಿಂದ ಪರಾಭವಗೊಂಡಿ ದ್ದರು.

ಮಾಜಿ ಪ್ರಧಾನಿಗಳಾದ ಚಂದ್ರಶೇಖರ, ಎಚ್.ಡಿ.ದೇವೆಗೌಡ ಅವರ ದೀರ್ಘಕಾಲದ ಒಡನಾಡಿಯಾಗಿದ್ದ ಖೇಡ ಅವರು, 1985-89 ರವರೆಗೆ ಇಂಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯರಾಗಿ, ವಿಜಯಪುರದ ಹಿಟ್ನಳ್ಳಿಯಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಕಾರಣರಾಗಿದ್ದರು.

ಕೃಷಿ, ರೈತರು, ನೀರಾವರಿ ಕುರಿತು ಅಪಾರ ಆಸಕ್ತಿ ಹೊಂದಿದ್ದು, ಡಾ.ರಾಜೇಂದ್ರ ಸಿಂಗ್ ಅವರೊಂದಿಗೆ ಅವರ ಸ್ವಯಂ ಸೇವಾ ಸಂಘದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಖೇಡ್ ಅವರ ನಿಧನಕ್ಕೆ ಮಾಜಿ ಪ್ರಧಾನ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ಎಂ.ಬಿ.ಪಾಟೀಲ್, ಹಿಂದುಳಿದ ಆಯೋಗಗಳ ಅಧ್ಯಕ್ಷ ಕೆ.ಜಯಪ್ರಕಾಶ ಹೆಗಡೆ, ವಿಧಾನಪರಿಷತ್ ಸದಸ್ಯರಾದ ಕೊಂಡಜ್ಜಿ ಮೋಹನ, ಸುನೀಲಗೌಡ ಪಾಟೀಲ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿ ದ್ದಾರೆ.

Leave a Reply

Your email address will not be published. Required fields are marked *