Saturday, 10th May 2025

Basanagouda Patil Yatnal: ರಾಹುಲ್​ ಗಾಂಧಿಗೆ ಅವಹೇಳನ: ಯತ್ನಾಳ್ ಮೇಲಿನ FIR ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಸಂಸದ ರಾಹುಲ್ ಗಾಂಧಿ (Rahul Gandhi) ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಹೈಕೋರ್ಟ್‌ (Karnataka High Court) ರದ್ದುಗೊಳಿಸಿದೆ.

ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಯತ್ನಾಳ್‌ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಇದೀಗ ಹೈಕೋರ್ಟ್ ಯತ್ನಾಳ್ ವಿರುದ್ಧ ದಾಖಲಾಗಿದ್ದ FIR ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಸೆಪ್ಟೆಂಬರ್ 18ರಂದು ಈ ಕುರಿತು ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ಅವರು ಶಾಸಕ ಬಸನಗೌಡ ಪಾಟೀಲ್ ವಿರುದ್ಧ FIR ದಾಖಲಿಸಿದ್ದರು.

ನವೆಂಬರ್​​ 28ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ವಿದೇಶಕ್ಕೆ ಹೋದಾಗ ರಾಹುಲ್​ ಗಾಂಧಿ ನೀಡಿದ ಕೆಲವು ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಿದ್ದೇನೆ ಎಂದು ಶಾಸಕ ಯತ್ನಳ್​ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೈಸೂರು ಆರ್‌ಟಿಒ ಕಚೇರಿಗೆ ಲೋಕಾಯುಕ್ತ ದಾಳಿ

ಮೈಸೂರು : ಮೈಸೂರಿನ ಆರ್ ಟಿ ಓ ಕಚೇರಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಮೈಸೂರಿನ ಆರ್ ಟಿ ಓ ಕಚೇರಿ ಮೇಲೆ ದಿಢೀರ್ ಎಂದು ಏಕಾಏಕಿ ದಾಳಿ ಮಾಡಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ನೇತೃತ್ವದ ತಂಡದಿಂದ ಕಾರ್ಯಚರಣೆ ನಡೆಸಲಾಗುತ್ತಿದ್ದು ಐದು ವಾಹನಗಳಲ್ಲಿ ಆಗಮಿಸಿ ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ ನಡೆಸಲಾಗುತ್ತಿದೆ. ಸಾರ್ವಜನಿಕ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರನೆ ದಾಳಿ ಮಾಡಿದ್ದಾರೆ ದಾಖಲೆ ಮತ್ತು ಹಣ ಪರಿಶೀಲನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: BS Yediyurappa: ಯತ್ನಾಳ್ ಹೊರಗಿನವರಲ್ಲ, ನಮ್ಮವರೇ ಎಂದ ಬಿಎಸ್‌ವೈ