Saturday, 10th May 2025

Forest Movie: ಚಿತ್ರಪ್ರೇಮಿಗಳ ಗಮನ ಸೆಳೆದ ʼಫಾರೆಸ್ಟ್ʼ ಚಿತ್ರದ ʼಪೈಸಾ ಪೈಸಾ ಪೈಸಾʼ ಹಾಡು

Forest Movie

ಬೆಂಗಳೂರು: ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ ʼಫಾರೆಸ್ಟ್ʼ ಚಿತ್ರಕ್ಕಾಗಿ (Forest Movie) ʼಬಹದ್ದೂರ್ʼ ಚೇತನ್ ಕುಮಾರ್ ಅವರು ಬರೆದಿರುವ ʼಪೈಸಾ ಪೈಸಾ ಪೈಸಾʼ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು, ಶರಣ್ಯ ಶೆಟ್ಟಿ ಹಾಗೂ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ. RAP ಶೈಲಿಯಲ್ಲಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ಶೀರ್ಷಿಕೆ, ತಾರಾಬಳಗ, ಕಾನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ ʼಫಾರೆಸ್ಟ್ʼ ಚಿತ್ರದ 2025 ರ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಸದಭಿರುಚಿ ಚಿತ್ರಗಳನ್ನು ನೀಡುವ ಹಂಬಲ ಹೊಂದಿರುವ ಎನ್.ಎಂ. ಕಾಂತರಾಜ್ ಅವರು ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್‌ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಕಾಡಿನಲ್ಲೇ ನಡೆಯುವ ಅಡ್ವೆಂಚರಸ್ ಕಾಮಿಡಿ ಕಥೆ ಹೊಂದಿರುವ ಈ ಚಿತ್ರವನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ. ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಈ ಸುದ್ದಿಯನ್ನೂ ಓದಿ | Christmas Dress 2024: ಕ್ರಿಸ್‌ಮಸ್ ಫೆಸ್ಟಿವ್ ಸೀಸನ್‌ನಲ್ಲಿ ಟ್ರೆಂಡಿಯಾದ ಲೇಡಿಸ್ ಫ್ಯಾಷನ್ ವೇರ್‌ಗಳಿವು!

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಮಲ್ಟಿಸ್ಟಾರರ್ ಸಿನಿಮಾದ ತಾರಾಬಳಗದಲ್ಲಿ ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದವರಿದ್ದಾರೆ.