Sunday, 11th May 2025

ದ್ವಿತೀಯ ಪಿಯು ಪರೀಕ್ಷೆ: ಕೆ ಎಸ್ ಆರ್ ಟಿ ಸಿಯಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿ ಪಡಿಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಗೆ ಮನೆಯಿಂದ ತೆರಳಿ, ಮರಳಿ ಬರೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.

ಕೆ ಎಸ್ ಆರ್ ಟಿ ಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ  ಮಾಹಿತಿ ಬಿಡುಗಡೆ ಮಾಡಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಮನವಿಯ ಮೇರೆಗೆ ದ್ವಿತೀಯ ಪಿಯು ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಸಮಯದಲ್ಲಿ ಕೆ ಎಸ್ ಆರ್ ಟಿ ಸಿಯ ಬಸ್ ಗಳಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ ಎಂದು ಹೇಳಿದೆ.

ಬಸ್ ಸಾಗುವ ಮಾರ್ಗದಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವಿದ್ದರೇ, ವಿದ್ಯಾರ್ಥಿಗಳನ್ನು ಇಳಿಸುವುದು, ಪರೀಕ್ಷೆ ಬರೆದ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಬರುವಂತೆಯೂ ಚಾಲಕ, ನಿರ್ವಾಹಕರಿಗೆ ಸೂಚಿಸಿದೆ.