Sunday, 11th May 2025

ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಭಾನುವಾರ ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿನ ಅಂಶಗಳು ಇಂತಿವೆ.

ಸರ್ಕಾರದ ಮಾರ್ಗಸೂಚಿಯನ್ವಯ, ಗಣೇಶೋತ್ಸವನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಆಚರಿಸಬೇಕಿದೆ.

ದೇಗುಲ ಕಚೇರಿಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸಬಹುದಾಗಿದೆ.

ನಗರ ಪ್ರದೇಶಗಳಲ್ಲಿ ವಾರ್ಡ್ ಗೆ ಒಂದು ಮೂರ್ತಿ , ಗ್ರಾಮಗಳಲ್ಲಿ ಒಂದು ಮೂರ್ತಿ ಪ್ರತಿಷ್ಠಾಪಿಸಬಹುದು.

ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು.

ಮನೆಗಳಲ್ಲಿ ಎರಡು ಅಡಿ ಹಾಗೂ ಸಾರ್ವಜನಿಕವಾಗಿ ನಾಲ್ಕು ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.

ಮೂರ್ತಿ ತರುವಾಗ ಅಥವಾ ಮೂರ್ತಿ ವಿಸರ್ಜನೆ ವೇಳೆ ಮೆರವಣಿಗೆ ನಿಷಿದ್ಧ.

ಗರಿಷ್ಟ ಐದು ದಿನಗಳವರೆಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.

ನಿಗದಿತ ಜಾಗದಲ್ಲಿ ಮಾತ್ರ ಗಣೇಶ ಮೂರ್ತಿ ವಿಸರ್ಜಿಸಬೇಕು.

ಗಣೇಶೋತ್ಸವದ ವೇಳೆ ಸಂಗೀತ, ನೃತ್ಯ ಡಿಜೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ.

ಅಪಾರ್ಟ್ ಮೆಂಟ್ ಗಳಲ್ಲೂ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ.

ಗಣೇಶ ವಿಸರ್ಜನೆ ವೇಳೆ ಸಾರ್ವಜನಿಕರು, ವಾಹನ ಓಡಾಟಕ್ಕೆ ತೊಂದರೆಯಾಗುವಂತಿಲ್ಲ.

ವಿಸರ್ಜನೆ ವೇಳೆ, ಕನಿಷ್ಟ ಜನ ಇರಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಕೋವಿಡ್ ಲಸಿಕೆ ಕಡ್ಡಾಯವಾಗಿರಬೇಕು.

ಅಲ್ಲದೇ ಲಸಿಕಾಕರಣದ ಪ್ರಮಾಣ ಪತ್ರ ಸಲ್ಲಿಸಬೇಕು.

ಜಿಲ್ಲಾ ಕೇಂದ್ರಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

Leave a Reply

Your email address will not be published. Required fields are marked *