Sunday, 11th May 2025

ಇಂದಿನಿಂದ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆ.7ರಿಂದ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Read This

ಭಾಷಣಕಾರರೆಲ್ಲರೂ ವೇದಿಕೆಯಲ್ಲಿದ್ದವರ ಹೆಸರುಗಳನ್ನು ಹೇಳುವ ಕಿರಿಕಿರಿ ಕುರಿತು

http://vishwavani.news/let-there-be/

ಭಾನುವಾರ ಭಾರಿ ಮಳೆಯಾಗುವ ಕಾರಣ ಮೈಸೂರು, ಚಾಮರಾಜನಗರ, ದಾವಣಗೆರೆ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆ.8 ರಂದು ಕಲಬುರ್ಗಿ, ಆ.9 ರಂದು ಹಾಸನ, ಆ.10 ರಂದು ಕಲಬುರ್ಗಿ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.