Sunday, 11th May 2025

ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ನೇಮಕ

ಕೊಲ್ಹಾರ: ಕಾಂಗ್ರೆಸ್ ಯುವ ಮುಖಂಡ ಹಾಗೂ ತಾಲ್ಲೂಕ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊಲ್ಹಾರ ಪಟ್ಟಣದ ಕಲ್ಲು ಸೊನ್ನದ ಅವರನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶದ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲಗೂರ ನೇಮಕ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.