ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಅ.31 ಮತ್ತು ನ.1ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲೂ ನ.1ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನವೆಂಬರ್ 01 ರವರೆಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ, ನಂತರ ಒಣ ಹವೆಯಿರುವ ಸಾಧ್ಯತೆಯಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನವೆಂಬರ್ 1 ರಿಂದ ನವೆಂಬರ್ 03 ರವರೆಗೆ ಹಾಗೂ ನವೆಂಬರ್ 6 ರಂದು ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ಉಳಿದ ದಿನಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.
ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) October 29, 2024
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. pic.twitter.com/atrXH5Rfd9
ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಮಳೆ
ಅ.30ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಹಾವೇರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಅ.31ರಂದು ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ, ಬೆಳಗಾವಿ, ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | World Stroke Day : ಮೆದುಳಿನ ಸ್ಟ್ರೋಕ್ ಎಂದರೇನು? ಅದನ್ನು ಅರಿತುಕೊಳ್ಳುವುದು ಹೇಗೆ?
ಅದೇ ರೀತಿ ನ. 1ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿಯ ಹವಾಮಾನ ನ.2ರಂದು ಕೂಡ ಮುಂದುವರಿಯಲಿದೆ ಎಂದು ತಿಳಿಸಿದೆ.