Saturday, 10th May 2025

Karnataka Rain: ಇಂದು ಬೆಂಗಳೂರು, ಕೊಡಗು ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Rain

ಬೆಂಗಳೂರು: ನ.17ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಉತ್ತರ ಕನ್ನಡ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ನ.18ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಅದೇ ರೀತಿ ನ.19ರಿಂದ 22ರವರೆಗೆ ರಾಜ್ಯದಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮೀನುಗಾರರಿಗೆ ಮುನ್ನೆಚ್ಚರಿಕೆ
35-45 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯ ವೇಗವು 55 ಕಿ.ಮೀ ವರೆಗೆ ತಲಪುವ ಸಾಧ್ಯತೆ ಇದ್ದು, ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಸೂಚಿಸಲಾಗಿದೆ.

ನ.18ರಂದು ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಈ ಸುದ್ದಿಯನ್ನೂ ಓದಿ | GSAT-20 Satellite: ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಇಸ್ರೋ; ಸ್ಪೇಸ್‌ಎಕ್ಸ್‌ ಮೂಲಕ ಉಪಗ್ರಹ ಉಡಾವಣೆ