Thursday, 15th May 2025

ಆಂಬ್ಯುಲೆನ್ಸ್ ಸೇವೆ ಆಧುನೀಕರಣಕ್ಕೆ ಸಚಿವ ಡಾ.ಕೆ.ಸುಧಾಕರ್ ಸೂಚನೆ

ಆಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಗುಣಮಟ್ಟದ ನಿರ್ವಹಣಾ ಪದ್ಧತಿ

ದೇಶದಲ್ಲೇ ಮಾದರಿ ಆಗುವಂತಹ ವ್ಯವಸ್ಥೆ ಜಾರಿ

ಆರ್ಥಿಕವಾಗಿ, ತಾಂತ್ರಿಕವಾಗಿ ಸಶಕ್ತವಾದ ಕಂಪನಿಗಳಿಂದ ಮಾತ್ರವೇ ಬಿಡ್

ಕರೆ/ ಸಂದೇಶ ನೀಡಿದ ಕೆಲವೇ ನಿಮಿಷಗಳಲ್ಲಿ ಅಂಬ್ಯುಲೆನ್ಸ್ ಸೇವೆ

ವೆಚ್ಚ ಮಾಡುವ ಪ್ರತಿ ಪೈಸೆಯ ಪ್ರಯೋಜನ ರೋಗಿಗಳಿಗೆ ಸಿಗಬೇಕು

ಬೆಂಗಳೂರು: ಗುಣಮಟ್ಟದ ಆಂಬ್ಯುಲೆನ್ಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.

ತುರ್ತು ಆರೋಗ್ಯ ಸೇವೆ ನೀಡುವ ಆಂಬ್ಯುಲೆನ್ಸ್ ಗಳ ಸೇವೆ ಮಹತ್ವದ್ದಾಗಿದೆ. ನಮ್ಮಲ್ಲಿರುವ ವ್ಯವಸ್ಥೆಯಲ್ಲಿ ಸಾಕಷ್ಟು ಲೋಪ ಗಳಿದ್ದು, ಆಧುನಿಕ ತಂತ್ರ ಜ್ಞಾನ ಮತ್ತು ಜಾಗತಿಕ ಗುಣಮಟ್ಟದ ನಿರ್ವಹಣಾ ಪದ್ಧತಿ ಅಳವಡಿಸಿಕೊಳ್ಳ ಬೇಕಿದೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

108 ಆಂಬ್ಯುಲೆನ್ಸ್ ಸೇವೆಗೆ ರಾಜ್ಯಸರ್ಕಾರ ದೊಡ್ಡ ಮೊತ್ತದ ಹಣ ನೀಡುತ್ತದೆ. ಆದರೆ ಗುಣಮಟ್ಟದ ಸೇವೆ ಲಭ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮಾದರಿ ಆಗುವಂತಹ ವ್ಯವಸ್ಥೆ ಜಾರಿಗೊಳಿಸಬೇಕಿದೆ.

ಆರ್ಥಿಕವಾಗಿ, ತಾಂತ್ರಿಕವಾಗಿ ಸಶಕ್ತವಾದ ಕಂಪನಿಗಳು ಮಾತ್ರವೇ ಬಿಡ್ ನಲ್ಲಿ ಪಾಲ್ಗೊಳ್ಳಲು ಅವಕಾಶ ಇರುವಂತಹ ಷರತ್ತು ಗಳನ್ನು ವಿಧಿಸಬೇಕು. ಭೌಗೋಳಿಕ ಸವಾಲು ಮತ್ತು ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕರಾರು ವಿಧಿಸಬೇಕು. ಕರೆ/ ಸಂದೇಶ ನೀಡಿದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿ ರೋಗಿಯನ್ನು ಕರೆದೊಯ್ಯುವಂತಿರಬೇಕು.

ಆಂಬ್ಯುಲೆನ್ಸ್ ನಿಗದಿ ಆಗುವ ಮೊದಲು ಕಾಲ್ ಸೆಂಟರ್ ನಲ್ಲಿ ಕರೆ ಸ್ವೀಕರಿಸಿ ಸಮೀಪದಲ್ಲಿ ಇರುವುದನ್ನು ಕಳುಹಿಸಬೇಕು. ಪ್ರಾಥ ಮಿಕ ಚಿಕಿತ್ಸೆ ನೀಡುವ ತರಬೇತಾದ ಸಿಬ್ಬಂದಿ ಇರಲೇಬೇಕು. ಉಬರ್ ಮತ್ತು ಓಲಾ ಮಾದರಿಯ ಆಯಪ್ ವ್ಯವಸ್ಥೆ ಇರಬೇಕು.

ವೆಚ್ಚ ಮಾಡುವ ಪ್ರತಿ ಪೈಸೆಯ ಪ್ರಯೋಜನ ರೋಗಿಗಳಿಗೆ ಸಿಗಬೇಕು. ಕಾನೂನಿನ ತಕರಾರು ಎದುರಾಗದಂತೆ ಗುತ್ತಿಗೆ ಕರಾರು ರೂಪಿಸಬೇಕು ಎಂದರು. ಸಭೆಯಲ್ಲಿ ಐ ಡೆಕ್ ಕಂಪನಿ ಪ್ರತಿನಿಧಿಗಳು, ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಹಾಜರಿದ್ದರು.

 

Leave a Reply

Your email address will not be published. Required fields are marked *