ಬೆಂಗಳೂರು: ಮೈಸೂರಿನ ಮುಡಾ ಸೈಟುಗಳ ಹಗರಣದಲ್ಲಿ (MUDA case, Muda scam) ತನಿಖೆಗೆ ಇಳಿದಿರುವ ಜಾರಿ ನಿರ್ದೇಶನಾಲಯ (ED), ಈಗ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ (ED notice) ನೀಡಿದೆ.
ಮುಡಾ ಅಕ್ರಮ ಆರೋಪದಲ್ಲಿ ಈಗಾಗಲೇ ಹಲವರನ್ನು ಇಡಿ ವಿಚಾರಣೆ ನಡೆಸಿದೆ. ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಆರೋಪ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಇಡಿ ಜಾರಿಗೊಳಿಸಿರುವ ನೋಟಿಸ್‌ನಲ್ಲಿ ನಾಳೆ ಮುಡಾ ಅಕ್ರಮ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ (Byrathi Suresh) ಅವರಿಗೂ ಮುಡಾ ಹಗರಣ ಸಂಬಂಧ ಇಡಿ ನೋಟಿಸ್ ನೀಡಲಾಗಿದೆ ಎನ್ನಲಾಗಿತ್ತು. ಆದರೇ ಇಡಿಯಿಂದ ಇದುವರೆಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ತಿದ್ದಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಮೇಲೂ ಆರೋಪ ಹೊರಿಸಲಾಗಿತ್ತು. ಈ ಪ್ರಕರಣವನ್ನು ಮುನ್ನೆಲೆಗೆ ತಂದ ದೂರುದಾರ ಸ್ನೇಹಮಯಿ ಕೃಷ್ಣ ಅವರ ಮೇಲೂ ಕೆಲವು ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ: DK Shivakumar: ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಎಂದ ಡಿ.ಕೆ. ಶಿವಕುಮಾರ್