Sunday, 11th May 2025

ದೆಹಲಿ ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಅರವಿಂದ ಬೆಲ್ಲದ

ಬೆಂಗಳೂರು: ನಾನು ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಸ್ಪಷ್ಟಪಡಿಸಿ ದ್ದಾರೆ.
ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಿಯಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ.
ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *