Sunday, 11th May 2025

Vande Bharat Train: ವಂದೇ ಭಾರತ್‌ಗೆ ಸೆ.16 ರಂದು ಪ್ರಧಾನಿ ಮೋದಿ ಚಾಲನೆ; ಹುಬ್ಬಳ್ಳಿ-ಪುಣೆ ನೇರ ಸಂಚಾರ

Vande Bharat train

ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು (Vande Bharat Train) ಸಂಚಾರಕ್ಕೆ ಸೆ.16 ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಂದು ಅಹ್ಮದಾಬಾದ್‌ನಿಂದ ವರ್ಚುವಲ್ ಮೂಲಕ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಸೆ.16 ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದ್ದು, ಹುಬ್ಬಳ್ಳಿಯಿಂದ ಸೆ.18 ರಿಂದ ಸಂಚಾರ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Bangalore Job Fair: ಬೆಂಗಳೂರಿನಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ

ಹುಬ್ಬಳ್ಳಿಯಿಂದ ವಾರದಲ್ಲಿ 3 ದಿನ

ವಾರದಲ್ಲಿ ಮೂರು ಬಾರಿ ಬುಧವಾರ, ಶುಕ್ರವಾರ, ರವಿವಾರ ಹುಬ್ಬಳ್ಳಿಯಿಂದ ಹಾಗೂ ಗುರುವಾರ, ಶನಿವಾರ, ಸೋಮವಾರದಂದು ಪುಣೆಯಿಂದ ವಂದೇ ಭಾರತ್ ಎಕ್ಸಪ್ರೆಸ್ ಸಂಚರಿಸಲಿದೆ.

ಕೊಲ್ಲಾಪುರ ಮೂಲಕ ಸಂಚರಿಸಲ್ಲ

ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು ಕೋಲ್ಹಾಪುರ ಮೂಲಕ ಸಂಚರಿಸುವುದಿಲ್ಲ ಎಂದೂ ಸಚಿವರು ಸ್ಪಷ್ಟಪಡಿಸಿದ್ದಾರೆ.

ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಈ ರೈಲುನ್ನು ಪ್ರತಿ ದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವೆ. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Surface-to-air Missile : ಶಾರ್ಟ್‌ ರೇಂಜ್‌ ಕ್ಷಿಪಣಿಯ ಪರೀಕ್ಷಾರ್ಥ ಹಾರಾಟ ಯಶಸ್ವಿ

ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ವಾಣಿಜ್ಯೋದ್ಯಮಕ್ಕೆ, ಕೈಗಾರಿಕಾ ವಸಾಹತುಗಳಿಗೆ ಅನಕೂಲವಾಗಲಿದೆ. ಅಲ್ಲದೇ, ಮುಂಬೈ ಸಂಪರ್ಕಕ್ಕೆ ಈ ಮಾರ್ಗ ಪ್ರಮುಖವಾಗಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *