Saturday, 10th May 2025

Police Firing: ವ್ಯಕ್ತಿಯನ್ನು ಬೆತ್ತಲಾಗಿಸಿ ಬೀದಿಯಲ್ಲಿ ಓಡಿಸಿದ ರೌಡಿ ಕಾಲಿಗೆ ಗುಂಡು

police firing

ಬೆಂಗಳೂರು: ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ನಗ್ನಗೊಳಿಸಿ ಥಳಿಸಿ (Assault case), ಬೀದಿಯಲ್ಲಿ ಓಡಿಸಿ ಗಹಗಹಿಸಿದ್ದ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡಿಕ್ಕಿ (Police Firing) ಕೆಡವಿದ್ದಾರೆ. ಬೆಂಗಳೂರಿನ ಬೀದಿಗಳಲ್ಲಿ (Bangalore Crime News) ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದ ರೌಡಿ ಶೀಟರ್‌ಗೆ ತಕ್ಕ ಪಾಠ ಕಲಿಸಿದ್ದಾರೆ.

ರೌಡಿಶೀಟರ್‌ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಬೆಂಗಳೂರಿನ ಸುಂಕದಕಟ್ಟೆ ಸಮೀಪ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಎಂಬಾತ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ. ವ್ಯಕ್ತಿಯನ್ನು ನಗ್ನಗೊಳಿಸಿ ರಸ್ತೆಯಲ್ಲಿ ಅಟ್ಟಾಡಿಸಿ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ.

ರೌಡಿಶೀಟರ್ ಪವನ್‌ ಬಂಧನಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಲೆ ಬೀಸಿದ್ದರು. ಕೃತ್ಯವೆಸಗಿದ್ದ ರೌಡಿಶೀಟರ್ ಪವನ್‌ನನ್ನು ಬಂಧಿಸಿ ಕರೆ ತರುವಾಗ ಬೆಂಗಳೂರಿನ ಜ್ಞಾನ ಭಾರತಿಯ ಉಳ್ಳಾಲು ಸಮೀಪ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಪವನ್
ಕಾಲಿಗೆ ಗುಂಡು ಹಾರಿಸಿದ್ದಾರೆ.

ಗೋವಿಂದರಾಜನಗರ ಇನ್ ಸ್ಪೆಕ್ಟರ್ ಸುಬ್ರಹ್ಮಣ್ಯ ಫೈರಿಂಗ್‌ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Assault Case: ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ, ಯುವಕನ ಬೆತ್ತಲೆ ಮಾಡಿ ಹಲ್ಲೆ

Leave a Reply

Your email address will not be published. Required fields are marked *