ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಇರುವೆಡೆ ವಕ್ಫ್ ಆಸ್ತಿ ಕಬಳಿಸಲು ಸಂಚು ನಡೆದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕೆಲ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇರದಿದ್ದರೆ ವಕ್ಫ್ ಬೋರ್ಡ್ (Waqf Board) ಮೂಲಕ ಆಸ್ತಿ ಕಬಳಿಸಿ ತಮ್ಮ ತಮ್ಮ ಹೆಸರಿಗೆ ಮಾಡಿಕೊಳ್ಳುವ ತರಾತುರಿಯಲ್ಲಿದ್ದಾರೆ ಇವರು ಎಂದು ಹೇಳಿದರು.
ವಕ್ಫ್ ಆಸ್ತಿ ಕಬಳಿಸಲು ಆಯಾ ಕಾಂಗ್ರೆಸ್ ಸರ್ಕಾರಗಳೂ ಸಾಥ್ ನೀಡುತ್ತಿರುವಂತಿದೆ. ರೈತರ, ಹಿಂದೂಗಳ, ಬಡ ಮುಸ್ಲಿಮರ ಮತ್ತು ದೇವಸ್ಥಾನಗಳ ಆಸ್ತಿ ವಶಪಡಿಸಿಕೊಳ್ಳಲು ಅದೇನು ಇವರಪ್ಪಂದೇ? ಎಂದು ಜೋಶಿ ಪ್ರಶ್ನಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Sunita Williams : ಬಾಹ್ಯಾಕಾಶ ಕೇಂದ್ರದಲ್ಲಿ ದೀಪಾವಳಿ ಆಚರಿಸಿ, ಶುಭಾಶಯ ತಿಳಿಸಿದ ಸುನೀತಾ ವಿಲಿಯಮ್ಸ್
ಅಪರಿಮಿತ ಅಧಿಕಾರ: 2013 ರಲ್ಲಿ ವಕ್ಫ್ಗೆ ಅಪರಿಮಿತವಾದಂತ ಅಧಿಕಾರ ಕೊಟ್ಟಿದ್ದಾರೆ. ರೈತರ, ದೇವಸ್ಥಾನಗಳ ಆಸ್ತಿ ವಕ್ಫ್ಗೆ ಕೊಡಲು ಇವರ್ಯಾರು? ಈ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಹೇಳಿದರು.
ಆಸ್ತಿ ಕಬಳಿಕೆ ವಿರುದ್ಧ ಬಿಜೆಪಿ ಹೋರಾಟ
40-50 ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರ ಜಮೀನನ್ನು ವಕ್ಫ್ಗೆ ಕೊಡಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ ಸಚಿವ ಜೋಶಿ, ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ವಕ್ಫ್, ವಿಜಯಪುರದಲ್ಲಿ ರೈತರ ಆಸ್ತಿ ತನ್ನದೆನ್ನುತ್ತಿದೆ. ಅಳ್ನಾವರದಲ್ಲಿ ಪೊಲೀಸ್ ಠಾಣೆ, ಉಪ್ಪಿನಬೆಟಗೇರಿ ಹೀಗೆ ಹಲವೆಡೆ ಹಿಂದೂಗಳ, ರೈತರ, ದೇವಸ್ಥಾನಗಳ ಅಷ್ಟೇ ಅಲ್ಲ ಬಡ ಮುಸ್ಲಿಮರ ಆಸ್ತಿಯನ್ನೂ ತನ್ನದೆನ್ನುತ್ತಿದೆ. ಇದು ರಾಜ್ಯ ಸರ್ಕಾರ ಯಾವ ಮಟ್ಟದಲ್ಲಿ ತುಷ್ಟೀಕರಣದಲ್ಲಿ ತೊಡಗಿದೆ ಎಂಬುದನ್ನು ತೋರಿಸುತ್ತಿದೆ ಎಂದು ಪ್ರಲ್ಹಾದ್ ಜೋಶಿ ಸರ್ಕಾರದ ವಿರುದ್ಧ ಹರಿಹಾಯ್ದರು.
ವಕ್ಫ್ಗೆ ನೋಟಿಸ್ ನೀಡದಿರಲು ಆದೇಶಿಸಿ: ಆಸ್ತಿ ತನ್ನದೆಂದು ಎಲ್ಲೂ ಯಾರಿಗೂ ವಕ್ಫ್ ನೋಟಿಸ್ ನೀಡದಂತೆ ರಾಜ್ಯ ಸರ್ಕಾರ ತಕ್ಷಣ ಆದೇಶ ಹೊರಡಿಸಬೇಕು. ಮೌಖಿಕ ಸೂಚನೆ, ಹೇಳಿಕೆಯನ್ನಲ್ಲ ಎಂದು ಪ್ರಲ್ಹಾದ್ ಜೋಶಿ ಆಗ್ರಹಿಸಿದರು.
ವಕ್ಫ್ ಕಾಯ್ದೆ ತಿದ್ದುಪಡಿ ಬೆಂಬಲಿಸಲ್ಲ ಏಕೆ?
ದೇಶದಲ್ಲಿ ಇಂಥ ಅವಾಂತರ ತಡೆಯಲು ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಮುಂದಾದರೆ ಇದನ್ನೇಕೆ ಕಾಂಗ್ರೆಸ್ ಬೆಂಬಲಿಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದರು.
ಈ ಸುದ್ದಿಯನ್ನೂ ಓದಿ | ANR National Awards 2024: ಸೂಪರ್ ಸ್ಟಾರ್ ಚಿರಂಜೀವಿಗೆ ANR ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ವಕ್ಫ್ ನೋಟಿಸ್ ನೋಡಿ ಜನ ದಂಗಾಗಿದ್ದಾರೆ. ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ನೋಟಿಸ್ ನೀಡದಂತೆ ವಕ್ಫ್ಗೆ ಆದೇಶ ನೀಡಬೇಕು. ಮತ್ತು ಕೇಂದ್ರ ಜಾರಿ ತರಲು ಉದ್ದೇಶಿಸಿರುವ ವಕ್ಫ್ ಕಾಯ್ದೆ ತಿದ್ದುಪಡಿಯನ್ನು ಬೆಂಬಲಿಸಬೇಕು ಎಂದು ಕೇಂದ್ರ ಸರ್ಕಾರ ಪ್ರಲ್ಹಾದ್ ಜೋಶಿ ಒತ್ತಾಯಿಸಿದರು.