Sunday, 11th May 2025

Zameer Ahmed Khan: ಸಚಿವ ಜಮೀರ್ ಅಹಮದ್‌ಗೆ ನಿಂದನೆ; ಪುನೀತ್ ಕೆರೆಹಳ್ಳಿ ಬಂಧನ

puneeth kerehalli

ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ (Zameer Ahmed Khan) ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಪೊಲೀಸರು ಬಂಧಿಸಿದ್ದಾರೆ.

ಪುನೀತ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ ಸಚಿವ ಜಮೀರ್ ಅಹ್ಮದ್ ಅವರನ್ನು ಟೀಕಿಸಿದ್ದರು. ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿದ್ದು, ಜೊತೆಗೆ ಪ್ರಾಣ ಬೆದರಿಕೆ ಕೂಡ ಹಾಕಿದ್ದಾರೆ. ಹಾಗಾಗಿ ಕೂಡಲೇ ಎಫ್​ಐಆರ್​ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಎಂದು ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನು ಆಧರಿಸಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪುನೀತ್ ಅವರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಪುನೀತ್ ಕೆರೆಹಳ್ಳಿಯನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಖಾನ್ ‘ಕಾಲಿಯಾ’ ಪದ ಬಳಕೆ ಮಾಡಿದ್ದು ರಾಜ್ಯಾದ್ಯಂತ ಕಿಡಿ ಹೊತ್ತಿಸಿದೆ. ಚನ್ನಪಟ್ಟಣದಲ್ಲಿ ಸಚಿವ ಜಮೀರ್ ಅಹ್ಮದ್ ಕಾಂಗ್ರೆಸ್ ಅಭ್ಯರ್ಥಿಯನ್ನ ಹೊಗಳುವ ಭರದಲ್ಲಿ ಈ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದರು. ಕೇಂದ್ರ ಸಚಿವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗೆ ವಿರೋಧ ವ್ಯಕ್ತವಾಗ್ತಿದ್ದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಎಚ್ಚೆತ್ತುಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಜೆಡಿಎಸ್ ಮುಖಂಡರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.