Saturday, 10th May 2025

Rain Alert: ಬೆಂಗಳೂರು ಮತ್ತಿತರ ಜಿಲ್ಲೆಗಳಲ್ಲಿ ಇಂದು ಮತ್ತೆ ಮಳೆ

Karnataka weather

ಬೆಂಗಳೂರು : ಬೆಂಗಳೂರು (Bengaluru rains) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತೆ ಮಳೆಯಾಗುವ (Rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ, ಕೊಡಗು , ಹಾಸನ, ಬೆಂಗಳೂರು ನಗರ, ತುಮಕೂರು, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿ, ಗದಗ ಭಾಗದಲ್ಲಿ ಮಳೆಯಾಗಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು, ನಾಳೆ ಕೊಡಗು, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ. ಇನ್ನುಳಿದ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.‌

ಒಂದೆರಡು ದಿನಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ಡಿಸೆಂಬರ್ 10ರವರೆಗೂ ಮುಂದುವರೆಯಲಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿ ಚಳಿ ಶುರುವಾಗುತ್ತಿದ್ದಂತೆ ಫೆಂಗಲ್ ಚಂಡಮಾರುತದ ಅಬ್ಬರದಿಂದಾಗಿ ಮತ್ತೆ ಮಳೆಯಾಗಿ ಚಳಿ ಮಾಯವಾಗಿತ್ತು. ಇದೀಗ ಎಲ್ಲೆಡೆ ಬಿಸಿಲು ಅಧಿಕವಾಗಿದೆ. ಆದರೆ ಚಳಿ ಮಾಯವಾಗಿದೆ.

ಅಂಕೋಲಾ, ಗೇರುಸೊಪ್ಪದಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಧಾರವಾಡದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಶುಭ್ರ ಆಕಾಶವಿದ್ದು, ಬಿಸಿಲಿದೆ, ಎಚ್​ಎಎಲ್​ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: Manada Kadalu Movie: 18 ವರ್ಷಗಳ ಬಳಿಕ ಮತ್ತೆ ಒಂದಾದ ʼಮುಂಗಾರು ಮಳೆʼ ಜೋಡಿ!