Saturday, 10th May 2025

ರಾಮನಗರಕ್ಕೆ ವಿಶೇಷ ಕೊಡುಗೆ: ರಾಮಮಂದಿರ ನಿರ್ಮಾಣ

ರಾಜ್ಯ ಬಜೆಟ್‌ 2023-24: ರಾಜ್ಯ ಬಜೆಟ್‌ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸುತ್ತಿದ್ದಾರೆ.

ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ.

ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ರಾಮನಗರಕ್ಕೆ ವಿಶೇಷ ಗಮನ ಹರಿಸಲಾಗಿದೆ.

ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ. ಮಂಚನಬೆಲೆ ಡ್ಯಾಂ ಹಿನ್ನೀರಿನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ‌ ಜಂಗಲ್ ಲಾಡ್ಜ್ ರೆಸಾರ್ಟ್ ಸ್ಥಾಪನೆಗೂ ರಾಜ್ಯ ಸರ್ಕಾರ ನಿರ್ಧರಿಸಿದೆ.