ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಬಣ ಗುದ್ದಾಟದ ನಡುವೆಯೇ ಇಂದು ರಾತ್ರಿ ರಾಜ್ಯ ಕಾಂಗ್ರೆಸ್(State Congress) ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ(ಜ.13) ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಿಎಲ್‌ಪಿ ಸಭೆ(CLP Meeting) ಹಾಗೂ ಜನವರಿ 21ರಂದು ಬೆಳಗಾವಿಯಲ್ಲಿ ಗಾಂಧಿ ಸಮಾವೇಶದ ಸೇರಿದಂತೆ ಇನ್ನೂ ಅನೇಕ ವಿಷಯಗಳ ಕುರಿತಂತೆ ಚರ್ಚಿಸಲು ಇಂದು(ಜ.12) ಬೆಂಗಳೂರಿಗೆ ರಣದೀಪ್ ಸಿಂಗ್ ಸುರ್ಜೆವಾಲಾ(Randeep Singh Surjewala) ಅವರು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದೆ ವೇಳೆ ಎಸ್ ಸಿ, ಎಸ್ ಟಿ ಸಚಿವರಿಂದ ಸಭೆಯ ಕುರಿತು ಅಜೆಂಡ ಮನವರಿಕೆ ಮಾಡುವ ಸಾಧ್ಯತೆಯಿದ್ದು, ಸುರ್ಜೆವಾಲಾಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುತ್ತದೆ. ಇಂದು ರಾತ್ರಿ ರಣದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಲಿದ್ದು, ಪಕ್ಷದ ಒಗ್ಗಟ್ಟು ಕಾಪಾಡಲು ಕೆಲವು ಮಹತ್ವದ ಸೂಚನೆ ನೀಡಲಿದ್ದಾರೆ ಎಂಬ ಮಾಹಿತಿಯಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಎಲ್ಲ ನಾಯಕರಿಗೆ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವ ಬಗ್ಗೆ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.ಅಲ್ಲದೇ ನಾಳೆ ಖಾಸಗಿ ಹೋಟೆಲ್ ಸಿ ಎಲ್ ಪಿ ಸಭೆ ನಡೆಯಲಿದ್ದು, ಜನವರಿ 21ರ ಬೆಳಗಾವಿಯಲ್ಲಿ ಗಾಂಧಿ ಸಮಾವೇಶ ಹಾಗೂ ಸಮಾವೇಶದ ಪೂರ್ವ ಸಿದ್ಧತೆ ಕುರಿತು ಚರ್ಚಿಸಲಿದ್ದಾರೆ. ಈ ವೇಳೆ ಡಿನ್ನರ್ ಗೆ ಬ್ರೇಕ್ ಹಾಕಿದ ವಿಷಯದ ಕುರಿತು ಗಂಭೀರವಾಗಿ ಚರ್ಚೆ ನಡೆಸಲಾಗುತ್ತದೆ. ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಇದೀಗ ಬಿರುಸುಗೊಂಡಿವೆ.
ರಾಜ್ಯ ಹೆದ್ದಾರಿ ಯೋಜನೆಗಳ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಚರ್ಚೆ
ನಾಲ್ಕು ದಿನಗಳ ಹಿಂದೆಯಷ್ಟೇ ಎಚ್.ಡಿ ಕುಮಾರಸ್ವಾಮಿ ಅವರು ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿರುವ ಅವರು, ಹಲವಾರು ಮನವಿಗಳನ್ನು ಸಲ್ಲಿಸಿ ಆದಷ್ಟು ಬೇಗ ಕ್ರಮ ವಹಿಸುವಂತೆ ಕೋರಿದ್ದಾರೆ.
ನವದೆಹಲಿಯಲ್ಲಿ ಜನವರಿ 8 ರ ಬೆಳಗ್ಗೆ ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈ ಪೈಕಿ ಕೆಲ ಯೋಜನೆಗಳ ಬಗ್ಗೆ ತಕ್ಷಣವೇ ಖುದ್ದಾಗಿ ಗಮನ ಹರಿಸುವುದಾಗಿ ಸಚಿವ ನಿತಿನ್ ಗಡ್ಕರಿ ಅವರು ಭರವಸೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ:Punjab Serial Killer: 18 ತಿಂಗಳಲ್ಲಿ 11 ಕೊಲೆ; ಸರಣಿ ಹಂತಕನ ಕೃತ್ಯ ಬಯಲಾಗಿದ್ದು ಹೇಗೆ?